ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಮಂಗಳೂರು: ಆಳ್ವಾಸ್ ಕಾಲೇಜಿನ ​​ಹಾಸ್ಟೆಲ್​ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ

ದಕ್ಷಿಣ ಕನ್ನಡ, ಮಾ.14: ಕಳೆದ 2023 ಡಿಸೆಂಬರ್ 24 ರಂದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತರ್ಚಿಹಾಳ ಗ್ರಾಮದ ಮಲ್ಲಪ್ಪನವರ ಎಂಬುವವರ ಪುತ್ರ ಮನೋಜ್ ಎಂಬಾತ ಜಿಲ್ಲೆಯ ಮೂಡಬಿದ್ರೆಯಲ್ಲಿರುವ(Mudbidri)ಆಳ್ವಾಸ್​ ಶಿಕ್ಷಣ ಸಂಸ್ಥೆಯ ಹಾಸ್ಟೇಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ವಿದ್ಯಾರ್ಥಿ ಕೋಲಾರ ಮೂಲದ ಸಂಜಯ್ ಭುವನ್ (16) ಎಂಬುವವರು ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾ.12 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ‌ ಬಂದಿದೆ.

NSUI ನ ಜಿಲ್ಲಾಧ್ಯಕ್ಷ ಸುಹಾನ್ ನೇತೃತ್ವದಲ್ಲಿ ಮುತ್ತಿಗೆ‌

ಈ ಕುರಿತು ವಿಷಯ ತಿಳಿಯುತ್ತಿದ್ದಂತೆ ಕಾಲೇಜಿಗೆ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ ಮುತ್ತಿಗೆ ಹಾಕಿದೆ. ಹೌದು, NSUI ನ ಜಿಲ್ಲಾಧ್ಯಕ್ಷ ಸುಹಾನ್ ನೇತೃತ್ವದಲ್ಲಿ ಮುತ್ತಿಗೆ‌ ಹಾಕಲಾಗಿದೆ. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರಿಂದ ಕಾಲೇಜು ಬಳಿ ಭದ್ರತೆ ಒದಗಿಸಲಾಗಿದೆ. ಇನ್ನು ವಿದ್ಯಾರ್ಥಿ ಆತ್ಮಹತ್ಯೆ ಕುರಿತು ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಿಷ್ಪಕ್ಷಪಾತ ತನಿಖೆಗೆ ವಿದ್ಯಾರ್ಥಿ ಸಂಘಟನೆ ಪೊಲೀಸರಿಗೆ ಆಗ್ರಹ ಮಾಡಿದೆ.

No Comments

Leave A Comment