ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸು ದಾಖಲು
ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ.
ಬಾಲಕಿಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಳೆದ ಫೆಬ್ರವರಿ 2 ರಂದು ಯಡಿಯೂರಪ್ಪ ಬಳಿ ಸಹಾಯ ಕೇಳಲು ಹೋಗಿದ್ದಾಗ ತನ್ನ ಮಗಳು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ತಾಯಿ ದೂರು ನೀಡಿರುವುದು ಎಫ್‌ಐಆರ್ ನಲ್ಲಿ ಉಲ್ಲೇಖವಾಗಿದೆ.
ವರದಿಯ ಪ್ರಕಾರ ಯಡಿಯೂರಪ್ಪ ಬಾಲಕಿಯನ್ನು ಕೋಣೆಯೊಂದಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತೆ ಕೊಠಡಿಯಿಂದ ಹೊರಗೆ ಓಡಿ ಬಂದಾಗ, ಆಕೆಯ ತಾಯಿಗೆ ಪ್ರಕರಣ ನಡೆದಿರುವುದು ಗೊತ್ತಾಗಿದೆ.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.
ಸದ್ಯ ಯಡಿಯೂರಪ್ಪ ಅವರಾಗಲಿ, ಅವರ ಕುಟುಂಬಸ್ಥರಾಗಲಿ ಕೇಸಿನ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ. ಅವರ ತಂಡ ಈ ಆರೋಪವನ್ನು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ ಎಂದು ತಿಳಿದುಬಂದಿದೆ.
53 ಮಂದಿ ವಿರುದ್ಧ ಮಹಿಳೆ ದೂರು: ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಉದ್ಯಮಿಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದ ಸಂತ್ರಸ್ತೆ ಬಾಲಕಿ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಟ ನಡೆಸುತ್ತಿರುವ ಯಡಿಯೂರಪ್ಪ ಅವರಿಗೆ ಈ ಕೇಸು ಸಂಕಷ್ಟ ತಂದೊಡ್ಡಲಿದೆ.
ಯಡಿಯೂರಪ್ಪ ಅವರು 2008 ರಿಂದ 2011 ರವರೆಗೆ, ಮೇ 2018 ರಲ್ಲಿ ಮತ್ತು ನಂತರ ಜುಲೈ 2019 ರಿಂದ 2021 ರವರೆಗೆ ಕರ್ನಾಟಕದ ಮುಖ್ಯಮಂತ್ರಿ ಸ್ಥಾನವನ್ನು ಹೊಂದಿದ್ದರು.