Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಲೈಂಗಿಕ ದೌರ್ಜನ್ಯ ಪ್ರಕರಣ : ಮಂಜುನಾಥ ಸ್ವಾಮೀಜಿಗೆ ನ್ಯಾಯಾಂಗ ಬಂಧನ

ಕುಣಿಗಲ್‌: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿದ್ದ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿ ಹಂಗರಹಳ್ಳಿ ಗ್ರಾಮದ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನದ (ಶ್ರೀ ಮಠ) ಬಾಲಮಂಜುನಾಥ ಸ್ವಾಮೀಜಿ (36) ಹಾಗೂ ಆಪ್ತ ಸಹಾಯಕ ಕೆ.ಅಭಿಲಾಷ್‌ (31) ಅವರನ್ನು ಗುರುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪೊಲೀಸರು ಮಂಜುನಾಥ ಸ್ವಾಮೀಜಿ, ಕೆ.ಅಭಿಲಾಷ್‌ ಅರನ್ನು ಮಾರ್ಚ್‌ 7ರಂದು ಮಧ್ಯರಾತ್ರಿ ಬಂಧಿಸಿ, 8ರಂದು ಪೋಕ್ಸೊ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ನ್ಯಾಯಾಲಯವು ಇಬ್ಬರು ಆರೋಪಿಗಳನ್ನು 5 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ವಹಿಸಿತ್ತು. ನಂತರ ಕಸ್ಟಡಿಯ ಅವಧಿಯನ್ನು ಮತ್ತೆರಡು ದಿನ ವಿಸ್ತರಿಸಲಾಗಿತ್ತು. ಗುರುವಾರ ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಮೂರು–ನಾಲ್ಕು ವರ್ಷಗಳಿಂದ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ಬಾಲಕಿ ಮಾರ್ಚ್‌ 7ರಂದು ಹುಲಿಯೂರುದುರ್ಗ ಠಾಣೆಯಲ್ಲಿ ದೂರು ನೀಡಿದ್ದರು. ಈ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರು ಇಬ್ಬರನ್ನು ಬಂಧಿಸಿ, ವಿಚಾರಣೆ ನಡೆಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು.

No Comments

Leave A Comment