ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಬೆಂಗಳೂರು: ಗಲ್ಫ್ ರಾಷ್ಟ್ರಗಳಿಗೆ ಹೆಣ್ಣುಮಕ್ಕಳ ಕಳ್ಳಸಾಗಣೆ ಆರೋಪ; NCPCR ಅಧಿಕಾರಿಗಳ ದಾಳಿ ವೇಳೆ 20 ಬಾಲಕಿಯರ ರಕ್ಷಣೆ!
ಬೆಂಗಳೂರು: ಬೆಂಗಳೂರಿನಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ಅನಾಥ ಆಶ್ರಮದ ಮೇಲೆ ದಾಳಿ ನಡೆಸಿದ್ದು ದಾಳಿಯಲ್ಲಿ 20 ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ. ಬಾಲಕಿಯರನ್ನು ಗಲ್ಫ್ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಬೆಂಗಳೂರಿನಲ್ಲಿ ಮಾನವ ಕಳ್ಳಸಾಗಣೆ ನಡೆಯುತ್ತಿದೆ ಎಂದು ಎನ್ಸಿಪಿಸಿಆರ್ ದೂರು ಆಧರಿಸಿ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಗೆ ಮುಂದಾಗಿದ್ದರು. ಮದರಸದಲ್ಲಿ ಸುಮಾರು 10-20 ಮಕ್ಕಳಿದ್ದರು. ಮಕ್ಕಳಿಗೆ ಸರಿಯಾಗಿ ಶಿಕ್ಷಣವನ್ನು ನೀಡುತ್ತಿಲ್ಲ. ಜೊತೆಗೆ ಧಾರ್ಮಿಕ ಶಿಕ್ಷಣವನ್ನು ನೀಡುತ್ತಿದ್ದಾರೆ. ಯಾವುದೇ ಲೈಸೆನ್ಸ್ ಇಲ್ಲದೆ ಮದರಸವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.
ಈ ಬಗ್ಗೆ ಪ್ರಿಯಾಂಕ ಕಂಗೂನ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ತನಿಖೆಯ ವೇಳೆ ಬಾಲಕಿಯರನ್ನು ಸಿಡಬ್ಲ್ಯುಸಿ ಮುಂದೆ ಹಾಜರುಪಡಿಸಲು ಮುಂದಾದಾಗ ಸಲ್ಮಾ ಎಂಬುವಳು ಮತ್ತು ಆಕೆಯ ಬಾಸ್ ಶಮೀರ್ ರೌಡಿಗಳನ್ನು ಕರೆಸಿ ಜಗಳಕ್ಕೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರ ಮಧ್ಯಸ್ಥಿಕೆಯಲ್ಲಿ ಗೂಂಡಾಗಳನ್ನು ನಿಯಂತ್ರಿಸಲಾಗಿದೆ. ಪೊಲೀಸರ ಸಲಹೆ ಮೇರೆಗೆ ಮಹಿಳಾ ಅಧಿಕಾರಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಠಾಣೆಗೆ ಬರಲಾಗಿದೆ ಎಂದು ಬರೆದಿದ್ದಾರೆ.
ಸಲ್ಮಾ ಕುವೈತ್‌ನಲ್ಲಿರುವ ಹುಡುಗಿಯರ ಸಂಬಂಧಗಳನ್ನು ಏರ್ಪಡಿಸುತ್ತಾಳೆ ಎಂದು ಸಂತ್ರಸ್ತ ಬಾಲಕಿಯರು ಆರೋಪ ಮಾಡಿದ್ದಾರೆ. ಇನ್ನು ಗಲ್ಫ್ ದೇಶಗಳಲ್ಲಿ, ಮದುವೆಯ ಹೆಸರಿನಲ್ಲಿ ಕಳ್ಳಸಾಗಣೆಗಾಗಿ ಹುಡುಗಿಯರನ್ನು ಶೃಂಗಾರಗೊಳಿಸುವ ಕೆಲಸವನ್ನು ಇಲ್ಲಿ ಮಾಡಲಾಗುತ್ತದೆ ಎನ್ನಲಾಗಿದೆ.