ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಲಿದೆ. ಮತ್ತು 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ....
ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆತ್ಮಹತ್ಯೆ
ಕುಂದಾಪುರ: ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಎಸ್(52) ಅವರು ನಿನ್ನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ಅವರು, ಮಧ್ಯಾಹ್ನ ಕಚೇರಿಯಿಂದ ಯಾರಿಗೂ ತಿಳಿಸದೆ ನೇರವಾಗಿ ಮನೆಗೆ ಹೋಗಿ, ಮಹಡಿಯ ಕೋಣೆಯಲ್ಲಿ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.