ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಕೇಜ್ರಿವಾಲ್ ಅಬಕಾರಿ ಹಗರಣದ ಪ್ರಮುಖ ಸಂಚುಕೋರ: ದೆಹಲಿ ನ್ಯಾಯಾಲಯಕ್ಕೆ ED ಹೇಳಿಕೆ; 10 ದಿನ ಕಸ್ಟಡಿಗೆ ಮನವಿ
ನವದೆಹಲಿ: ಜಾರಿ ನಿರ್ದೇಶನಾಲಯ ಶುಕ್ರವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಲ್ಲಿನ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 10 ದಿನಗಳ ಕಸ್ಟಡಿಗೆ ಕೋರಿದೆ.
ಇಂದು ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ನ್ಯಾಯಾಲಯ ಆವರಣ ಹಾಗೂ ಸುತ್ತಮುತ್ತ ಬಿಗಿ ಭದ್ರತೆ ನಡುವೆ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ಎಎಪಿ ರಾಷ್ಟ್ರೀಯ ಸಂಚಾಲಕರಾದ ಅರವಿಂದ್ ಕೇಜ್ರಿವಾಲ್ ಅವರನ್ನು ಹಾಜರುಪಡಿಸಲಾಯಿತು. ನಂತರ ನಾವು 10 ದಿನಗಳ ಕಸ್ಟಡಿಗೆ ಅರ್ಜಿ ಸಲ್ಲಿಸಿದ್ದೇವೆ ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿತು.
ಇಡಿ ಪರವಾಗಿ ಎಎಸ್‌ಜಿ ಎಸ್‌ವಿ ರಾಜು ವಾದ ಮಂಡಿಸಿದರೆ, ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸುತ್ತಿದ್ದಾರೆ. ಅಬಕಾರಿ ನೀತಿ ಪ್ರಕರಣ ಸಂಬಂಧಿತ ಅಕ್ರಮ ಹಣ ವರ್ಗಾವಣೆಯಲ್ಲಿ ಜಾರಿ ನಿರ್ದೇಶನಾಲಯದ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಮನವಿಯನ್ನು ಹಿಂಪಡೆದ ಬೆನ್ನಲ್ಲೇ ಕೇಜ್ರಿವಾಲ್ ಅವರನ್ನು ವಿಚಾರಣಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.