``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......
ಚಿಕ್ಕಮಗಳೂರು: ಕೋಟಾ ಶ್ರೀನಿವಾಸ ಪೂಜಾರಿಗೆ 25 ಸಾವಿರ ಹಣ ದೇಣಿಗೆ ನೀಡಿದ ಚುರುಮುರಿ ವ್ಯಾಪಾರಿ
ಚಿಕ್ಕಮಗಳೂರು: ಸರಳತೆಯಿಂದಲೇ ಗಮನ ಸೆಳೆಯುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ವಿಶೇಷ ವ್ಯಕ್ತಿಯೊಬ್ಬರು ದೇಣಿಗೆ ನೀಡಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರ ಚುನಾವಣಾ ಖರ್ಚಿಗೆ ಚುರುಮುರಿ ವ್ಯಾಪಾರಿಯೊಬ್ಬರು 25,000 ರೂ ನೀಡಿದ್ದಾರೆ.
ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತ ಹಾಗೂ ಚುರುಮುರಿ ವ್ಯಾಪಾರಿಯೋರ್ವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ 25,000 ಹಣ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ.
ಕೋಟಾ ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರು ನಗರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಈ ವೇಳೆ ಪ್ರಚಾರಕ್ಕೆಂದು ಹೋದಾಗ ಚಿಕ್ಕಮಗಳೂರು ಹೊರವಲಯದ ತೇಗೂರು ಸರ್ಕಲ್ ನಲ್ಲಿನ ಚುರುಮುರಿ ವ್ಯಾಪಾರಿ ಲೊಕೇಶ್ ಬಾಬು ಅವರು ಕೋಟಾಗೆ 25 ಸಾವಿರ ಹಣವನ್ನ ಚುನಾವಣಾ ಖರ್ಚಿಗಾಗಿ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ.
ಹಣದ ಜೊತೆ ಎಲೆ-ಅಡಿಕೆ-ಬಾಳೆಹಣ್ಣು ಸೇರಿ ವಿವಿಧ ಹಣ್ಣುಗಳನ್ನ ನೀಡಿ ಚುನಾವಣೆಗೆ ಶುಭಕೋರಿದ್ದಾರೆ.ಕಳೆದ 25 ವರ್ಷಗಳಿಂದ ತೇಗೂರು ಸರ್ಕಲ್ ನಲ್ಲಿ ಚುರುಮುರಿ ಅಂಗಡಿ ಇಟ್ಟಿರುವ ಲೊಕೇಶ್ ಬಿಜೆಪಿಯ ಅಪ್ಪಟ ಕಾರ್ಯಕರ್ತ. ಇಂದು ಕೋಟಾ ಪ್ರತಿಯೊಂದು ಅಂಗಡಿಗಳಿಗೆ ಹೋಗಿ ಮತಯಾಚನೆ ಮಾಡುವ ವೇಳೆ ಹಣ ನೀಡಿ ಶುಭಕೋರಿದ್ದಾರೆ.