Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

‘ಕೇಜ್ರಿವಾಲ್ ಹಣಕ್ಕಾಗಿ ನೂತನ ಲಿಕ್ಕರ್ ಪಾಲಿಸಿ ಮಾಡಿದ್ದಾರೆ’- ಅಣ್ಣಾಹಜಾರೆ

ನವದೆಹಲಿ:ಮಾ 22,ಮದ್ಯದ ವಿರುದ್ಧ ಧ್ವನಿ ಎತ್ತಿದ್ದ ಕೇಜ್ರಿವಾಲ್ ಹಣಕ್ಕಾಗಿ ನೂತನ ಲಿಕ್ಕರ್ ಪಾಲಿಸಿ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷವು ಮದ್ಯ ನೀತಿಯನ್ನು ಮಾಡಬಾರದಿತ್ತು. ಮದ್ಯದ ವಿರುದ್ಧ ಧ್ವನಿ ಎತ್ತಿದ್ದ ವ್ಯಕ್ತಿ ಇಂದು ಮದ್ಯ ನೀತಿಯನ್ನು ಸಿದ್ಧಪಡಿಸಿದ್ದು ನನಗೆ ಬೇಸರ ತಂದಿದೆ.ಕೇಜ್ರಿವಾಲ್ ಅವರನ್ನು ಇ.ಡಿ. ಬಂಧಿಸಿದ ಬಳಿಕ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅಣ್ಣಾ ಹಜಾರೆ, ಈಗ ಏನಾಗುತ್ತದೆಯೋ ಅದು ಕಾನೂನಿನ ಪ್ರಕಾರ ನಡೆಯಬೇಕು ಎಂದು ಹೇಳಿದ್ದಾರೆ.

ಈ ಹಿಂದೆಯೂ ಅಣ್ಣಾ ಹಜಾರೆ, ಮದ್ಯ ನೀತಿ ವಿರೋಧಿಸಿ ಮಾತನಾಡಿದರು. 2022 ರಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದು ನೀತಿಯ ಬಗ್ಗೆ ತಮ್ಮ ಬೇಸರ ವ್ಯಕ್ತಪಡಿಸಿದ್ದರು. ಪತ್ರದಲ್ಲಿ ನೀವು ಮುಖ್ಯಮಂತ್ರಿಯಾದ ನಂತರ ನಾನು ಇದೇ ಮೊದಲ ಬಾರಿಗೆ ನಿಮಗೆ ಪತ್ರ ಬರೆಯುತ್ತಿದ್ದೇನೆ. ಏಕೆಂದರೆ ನಿಮ್ಮ ಸರ್ಕಾರದ ಮದ್ಯ ನೀತಿಯ ಇತ್ತೀಚಿನ ಸುದ್ದಿ ವರದಿಗಳಿಂದ ನನಗೆ ನೋವಾಗಿದೆ. ಮದ್ಯದಂತೆಯೇ ಅಧಿಕಾರವೂ ಅಮಲೇರಿಸುತ್ತದೆ. ನಿಮಗೆ ಅಧಿಕಾರದ ಅಮಲು ಇದೆ ಎಂದು ತೋರುತ್ತದೆ ಎಂದು ಟೀಕಿಸಿದ್ದರು.

No Comments

Leave A Comment