ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಮೋದಿಯನ್ನು ಪ್ರೀತಿಯಿಂದ ಸ್ವಾಗತಿಸಿದ ಭೂತಾನ್ ಪ್ರಧಾನಿ ತ್ಶೆರಿಂಗ್ ಟೊಬ್ಗೇ
ಥಿಂಪು: ಮಾ 22: ಎರಡು ದಿನಗಳ ಭೇಟಿಗಾಗಿ ಭೂತಾನ್ ತೆರಳಿದ ನರೇಂದ್ರ ಮೋದಿಯವರಿಗೆ ಅಲ್ಲಿ ಭವ್ಯ ಸ್ವಾಗತ ದಿಂ ಬರ ಮಾಡಿಕೊಂಡಿದ್ದಾರೆ. ಭೂತಾನ್ ಪ್ರಧಾನಿ ತ್ಶೆರಿಂಗ್ ಟೊಬ್ಗೇ ಅವರು ಮೋದಿಯವರನ್ನು ಆಲಿಂಗಿಸಿ ನನ್ನ ಹಿರಿಯ ಸಹೋದರ ನಿಮಗೆ ಸ್ವಾಗತ ಎಂದು ಹೇಳಿದ್ದಾರೆ.
ಮಾರ್ಚ್ 21 ಹಾಗೂ 22 ರಂದು ಪ್ರಧಾನಿ ಮೋದಿಯವರ ಭೂತಾನ್ ಭೇಟಿ ನೀಡಬೇಕಿತ್ತು. ಆದರೆ ಪ್ರತಿಕೂಲ ಹವಾಮಾನದಿಂದಾಗಿ ಪ್ರಧಾನಿ ಮೋದಿಯವರ ಈ ಭೇಟಿಯನ್ನು ಮುಂದೂಡಲಾಯಿತು. ಪ್ರಧಾನಿ ಮೋದಿ ಇಂದು ಭೂತಾನ್‌ಗೆ ತೆರಳಿದ್ದಾರೆ.
ಇಂದು ಭೂತಾನ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನರೇಂದ್ರ ಮೋದಿಯವರಿಗೆ ಪ್ರಧಾನಿ ತ್ಶೆರಿಂಗ್ ತೊಬ್ಗೇಅವರು ಭವ್ಯ ಸ್ವಾಗತ ಕೋರಿದರು. ಜೊತೆಗೆ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರಿಗೆ ಗೌರವ ರಕ್ಷೆ ನೀಡಲಾಯಿತು.ರಸ್ತೆಬದಿಯಲ್ಲಿ ಜನ ನಿಂತು ಪ್ರಧಾನಿ ಮೋದಿಯವರನ್ನು ವಿಶೇಷವಾಗಿ ಸ್ವಾಗತಿಸಿದರು. ಪ್ರಧಾನಿ ಮೋದಿ ನಮ್ಮ ದೇಶಕ್ಕೆ ಬಂದಿದ್ದಾರೆ, ನಮಗೆ ತುಂಬಾ ಸಂತೋಷವಾಗಿದೆ ಎಂದು ಮಗುವೊಂದು ಹೇಳಿದೆ.
ಪ್ರಧಾನಿ ಮೋದಿಯವರು ಭೂತಾನ್‌ಗೆ ಆಗಮಿಸಿದ ನಂತರ, ಪ್ರಧಾನಿ ತ್ಶೆರಿಂಗ್ ತೊಬ್ಗೇ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ‘ನನ್ನ ಹಿರಿಯ ಸಹೋದರ, ಭೂತಾನ್‌ಗೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.