ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
‘ಜೈಲಿನ ಒಳಗಿರಲಿ, ಹೊರಗಿರಲಿ, ನನ್ನ ಜೀವನವು ದೇಶಕ್ಕಾಗಿ ಸಮರ್ಪಿತ’- ಕೇಜ್ರಿವಾಲ್
ನವದೆಹಲಿ:ಮಾ,22: ಜೈಲಿನ ಒಳಗಿರಲಿ, ಹೊರಗಿರಲಿ, ನನ್ನ ಜೀವನವು ದೇಶಕ್ಕಾಗಿ ಸಮರ್ಪಿತ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಮದ್ಯ ಹರಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿಯನ್ನು ಇಂದು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿ, ಜೈಲಿನಲ್ಲಿದ್ದರೂ ಹೊರಗಿದ್ದರೂ ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವುದಾಗಿ ಹೇಳಿದ್ದಾರೆ.
ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಗುರುವಾರ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ. ಇಂದು 10 ದಿನಗಳ ಕಸ್ಟಡಿಗೆ ಕೋರಿದೆ.
ಕೇಜ್ರಿವಾಲ್ ಬಂಧನ ಖಂಡಿಸಿ ಪ್ರತಿಭಟನೆಗೆ ನಡೆಯಿತು. ಪ್ರತಿಭಟನೆಯ ವೇಳೆ ದೆಹಲಿ ಸಚಿವ ಸೌರಭ್ ಭಾರದ್ವಾಜ್ ಅವರು ಕೇಜ್ರಿವಾಲ್ ಅವರ ಕುಟುಂಬವನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ. ಪಕ್ಷದ ಕಾರ್ಯಕರ್ತರಿಗೆ ಪ್ರತಿಭಟನೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ. ಇದು ಸಂಪೂರ್ಣ ಸರ್ವಾಧಿಕಾರ. ಲೋಕಸಭಾ ಚುನಾವಣೆ ಗೆಲ್ಲಲು ಹೀಗೆ ಮಾಡಲಾಗುತ್ತಿದೆ. ಜನರು ಎಲ್ಲೇ ಇದ್ದರೂ ಪ್ರತಿಭಟನೆ ಮಾಡುತ್ತಾರೆ, ಇದು ನಿಲ್ಲುವುದಿಲ್ಲ. ಕ್ರಾಂತಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.