ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಜೆಡಿಎಸ್‌ಗೆ ಆಘಾತ: ಕಾಂಗ್ರೆಸ್ ಸೇರಿದ ಮಂಡ್ಯ ಭಾಗದ ಮೂವರು ಮಾಜಿ ಶಾಸಕರು

ಕರ್ನಾಟಕ ರಾಜಕೀಯರಾಜ್ಯ ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕ ಮಾಜಿ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಮಾಜಿ ಎಂಎಲ್‌ಸಿ ಅಪ್ಪಾಜಿಗೌಡ, ಮಾಜಿ ಶಾಸಕ ಎಂ ಶ್ರೀನಿವಾಸ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೆಂಕಟೇಶ್, ಸದಸ್ಯ ಯೋಗೇಶ್, ಮಂಜುನಾಥ್ ಗೌಡ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಆಶಾ ಸುರೇಶ್ ಅವರು ಸೇರಿದಂತೆ ನೂರಾರು ಕಾರ್ಯಕರ್ತರು ಜೆಡಿಎಸ್ ಮತ್ತು ಬಿಜೆಪಿ ತೊರೆದು ಶುಕ್ರವಾರ ಕಾಂಗ್ರೆಸ್ ಸೇರ್ಪಡೆಗೊಂಡರು.

ಬಿಜೆಪಿ ಜತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದ ರಿಂದ ಆಕ್ರೋಶಗೊಂಡು ವಿಧಾನ ಪರಿಷತ್ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿ ಜೆಡಿಎಸ್ ತೊರೆದ ಮರಿತಿಬ್ಬೇಗೌಡ ಅವರು ತಮ್ಮ ಅಪಾರ ಅಭಿಮಾನಿಗಳ ಜತೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇವರೆನ್ನಲ್ಲ ಕಾಂಗ್ರೆಸ್‌ಗೆ ಸ್ವಾಗತಿಸಿದರು.

No Comments

Leave A Comment