Log In
BREAKING NEWS >
``````````````ನಮ್ಮೆಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ,ಓದುಗರಿಗೆ ಕರಾವಳಿ ಕಿರಣ ಡಾಟ್ ಕಾ೦ನ ವತಿಯಿ೦ದ "ಚ೦ದ್ರಮಾನ ಯುಗಾದಿ"ಯ ಶುಭಾಶಯಗಳು `````````````

ಹಿರಿಯಡ್ಕ:ಟಿಪ್ಪರ್ ಹಾಗೂ ಖಾಸಗಿ ಬಸ್ ಮತ್ತು ಬೈಕ್ ನಡುವೆ ಸರಣಿ ಅಪಘಾತ – ಹಲವರಿಗೆ ಗಾಯ

ಹಿರಿಯಡ್ಕ:ಉಡುಪಿ ಜಿಲ್ಲೆಯ ಹಿರಿಯಡ್ಕ ಠಾಣೆ ವ್ಯಾಪ್ತಿಯ ಓಂತಿಬೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಸರಣಿ ಅಪಘಾತದಲ್ಲಿ ಹಲವರು ಗಾಯಗೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.

ಹಿರಿಯಡ್ಕದಿಂದ ಆತ್ರಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ಚಾಲಕನ ಅತೀ ವೇಗ, ಅಜಾಗರೂಕತೆಯ ಚಾಲನೆಯಿಂದ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದು ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪ‌ರ್ ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಟಿಪ್ಪ‌ರ್ ಚಾಲಕ ಹಾಗೂ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ಅಪಘಾತದಲ್ಲಿ ಬಸ್ ಪ್ರಯಾಣಿಕರಿಗೂ ಸಣ್ಣಪುಟ್ಟಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment