ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಕಾನೂನು ಬಾಹಿರವಾಗಿ ಮಗು ದತ್ತು ಪ್ರಕರಣ: ರೀಲ್ಸ್ ಸ್ಟಾರ್ ಸೋನು ಗೌಡ ನಾಲ್ಕು ದಿನ ಪೊಲೀಸ್ ವಶಕ್ಕೆ

ಬೆಂಗಳೂರು: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಬಿಗ್ ಬಾಸ್‌ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರನ್ನು ಶುಕ್ರವಾರ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.

ಬ್ಯಾಡರಹಳ್ಳಿ ಪೊಲೀಸರು ಇಂದು ಸೋನು ಗೌಡ ಅವರನ್ನು ಬೆಂಗಳೂರಿನ ಸಿಜೆಎಂ ಕೋರ್ಟ್ ಗೆ ಹಾಜರುಪಡಿಸಿದರು. ಮಗು ಪೋಷಕರನ್ನು ರಾಯಚೂರಿಗೆ ಕರೆದುಕೊಂಡು ಹೋಗಿ ಮಹಜರು ಮತ್ತು ಹೇಳಿಕೆ ಪಡೆಯಬೇಕಿದೆ. ಅಪಾರ್ಟ್ ಮೆಂಟ್ ನ ಅಕ್ಕಪಕ್ಕದ ಸ್ಥಳೀಯರ ಹೇಳಿಕೆ ಪಡೆಯಬೇಕಿದೆ. ಈ ಉದ್ದೇಶ ದಿಂದ ನಾಲ್ಕು ದಿನಗಳ ಕಾಲ ತಮ್ಮ ಕಸ್ಟಡಿ ನೀಡುವಂತೆ ಪೊಲೀಸರು ಮನವಿ ಮಾಡಿದರು.

ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್, ಆರೋಪಿ ಸೋನು ಗೌಡ ಅವರನ್ನು ಮಾರ್ಚ್ 25ರ ವರೆಗೆ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.

ಈ ವರ್ಷದ ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಸೋನು ಗೌಡ ಅವರನ್ನು ಇಂದು ಬೆಳಗಿನ ಜಾವ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಸೋನು ಗೌಡರನ್ನು ವಶಕ್ಕೆ ಪಡೆದಿದ್ದಾರೆ.

ಮಗು ದತ್ತು ಪಡೆದಿರುವುದಾಗಿ ಸೋನು ಗೌಡ ಇತ್ತೀಚೆಗೆ ಹೇಳಿಕೊಂಡಿದ್ದರು. 8 ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ಜೆ.ಜೆ.ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ.

No Comments

Leave A Comment