Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ತುಮಕೂರು: ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವಗಳ ಪತ್ತೆ ಪ್ರಕರಣ; ಮೂವರ ಗುರುತು ಪತ್ತೆ

ತುಮಕೂರು, ಮಾ.23: ತುಮಕೂರು(Tumakuru)ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಮೂವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದವರು ಎಂದು ತಿಳಿದು ಬಂದಿದ್ದು, ಇಸಾಕ್(56), ಸಾಹುಲ್(45) ಹಾಗೂ ಇಮ್ತಿಯಾಜ್(34) ಮೃತರು.  ಇದೀಗ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದು, ಬಳಿಕ ಪೊಲೀಸರು ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರ ಮಾಡಲಿದ್ದಾರೆ. ಇನ್ನು ಕಾರಿನಲ್ಲಿ ಮೂವರ ಶವ ಪತ್ತೆ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಘಟನೆ ವಿವರ

ಮೊನ್ನೆ(ಮಾ.21) ರಾತ್ರಿ ನಡೆದಿರುವ ಘಟನೆ ಇದಾಗಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಕೆರೆಗೆ ಕಾರು ತಳ್ಳಿರುವ ಶಂಕೆ ವ್ಯಕ್ತವಾಗಿತ್ತು. ಇದು ದಕ್ಷಿಣ ಕನ್ನಡ ಮೂಲದ ರಫಿಕ್ ಎಂಬುವರಿಗೆ ಸೇರಿದ ಕಾರು ಎನ್ನಲಾಗಿದೆ. ಸ್ಥಳಕ್ಕೆ ತುಮಕೂರು ಎಸ್ ಪಿ ಅಶೋಕ್ ಕೆ.ವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇನ್ನು ಭೇಟಿ ಬಳಿಕ ಮಾತನಾಡಿದ ತುಮಕೂರು ಎಸ್​ಪಿ ಅಶೋಕ್ ಕೆ.ವಿ. ಘಟನೆ ಕುರಿತು ಇವತ್ತು ಮಧ್ಯಾಹ್ನ 1 ಗಂಟೆಗೆ ನಮಗೆ ಮಾಹಿತಿ ಬಂದಿದೆ. ತುಮಕೂರು ಗ್ರಾಮಾಂತರದ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕುಚ್ಚಂಗಿ ಕೆರೆಯ ಮಧ್ಯದಲ್ಲಿ ವೈಟ್ ಕಲರ್ ಮಾರುತಿ ಎಸ್ ಪ್ರೆಸ್ ಕಾರಿನಲ್ಲಿ ಮೂರು ಮೃತದೇಹಗಳು ಸುಟ್ಟು ಸ್ಥಿತಿಯಲ್ಲಿ ಸಿಕ್ಕಿವೆ. ಕೂಡಲೇ ನಮ್ಮ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಗ ಎಫ್ಎಸ್ಎಲ್ ಟೀಂ ಬಂದಿದೆ, ತಪಾಸಣೆ ನಡಿತಿದೆ. ಕಾರಿನ ನಂಬರ್ ಬೇಸ್ ಮೇಲೆ ಕಾರು ಎಲ್ಲಿಂದ ಬಂತು, ಹೇಗೆ ಬಂತು ಎಂಬುದರ ಬಗ್ಗೆ ತನಿಖೆ ನಡೆಸಲಾಗಿದೆ. ಈ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡು. ಪ್ರಕರಣವನ್ನ ಆದಷ್ಟು ಬೇಗ ಪತ್ತೆ ಮಾಡುತ್ತೇವೆ ಎಂದು ಹೇಳಿದ್ದರು.

No Comments

Leave A Comment