ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಇ.ಡಿ ಕಸ್ಟಡಿಯಿಂದಲೇ ಮೊದಲ ಸರ್ಕಾರಿ ನಿರ್ದೇಶನ ಹೊರಡಿಸಿದ ದೆಹಲಿ ಸಿಎಂ ಕೇಜ್ರಿವಾಲ್!
ನವದೆಹಲಿ: ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು. ಜೈಲಿನಿಂದಲೇ ತಮ್ಮ ಮೊದಲ ಸರ್ಕಾರಿ ಆದೇಶವನ್ನು ಹೊರಡಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ರಾಷ್ಟ್ರ ರಾಜಧಾನಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿನ ಅವರ ಅಧಿಕೃತ ನಿವಾಸದಲ್ಲಿ ಶೋಧದ ನಂತರ ಅಕ್ರಮ ಹಣ ವರ್ಗಾವಣೆ ತಡೆ ಕಾನೂನಿನ ಅಡಿಯಲ್ಲಿ ಇಡಿ ಬಂಧನ ಮಾಡಿತ್ತು.
ಆಪಾದಿತ ಮದ್ಯ ಹಗರಣದಲ್ಲಿ ಅವರ ಪಾತ್ರದ ಕುರಿತು “ವಿವರವಾದ ಮತ್ತು ನಿರಂತರ ವಿಚಾರಣೆ” ಗಾಗಿ ಶುಕ್ರವಾರ ಅವರನ್ನು ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಲಾಗಿದೆ.
ಕೇಜ್ರಿವಾಲ್ ಅವರ ಬಂಧನ ಆದ ಕ್ಷಣದಿಂದ ಪಕ್ಷದ ನಾಯಕರು ಅರವಿಂದ್ ಕೇಜ್ರಿವಾಲ್ ಅವರೇ ಮುಖ್ಯಮಂತ್ರಿಯಾಗಿ ಉಳಿಯಲಿದ್ದಾರೆ ಎಂದಿದ್ದರು, ಅಗತ್ಯ ಬಿದ್ದಲ್ಲಿ ಸರ್ಕಾರವನ್ನು ಜೈಲಿನಿಂದಲೇ ನಡೆಸಲಿದ್ದಾರೆ ಎಂದು ತಿಳಿಸಿದ್ದರು.
ಇದರ ಬೆನ್ನಲ್ಲೇ ಕೇಜ್ರಿವಾಲ್ ಅವರು ದೆಹಲಿ ಸರ್ಕಾರದ ಮೊದಲ ನಿರ್ದೇಶನವನ್ನು ಹೊರಡಿಸಿದ್ದಾರೆ. ಇದು ಜಲ ಇಲಾಖೆಗೆ ಸಂಬಂಧಪಟ್ಟದ್ದಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಜಲ ಸಚಿವೆ ಅತಿಶಿ ಅವರು ಇಂದು ಆದೇಶದ ಕುರಿತು ಪ್ರಕಟಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ನಡುವೆ ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಶನಿವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೋಳಿ ರಜೆಯ ಕಾರಣ ನ್ಯಾಯಾಲಯವು ಇದೇ 27ಕ್ಕೂ ಮೊದಲು ಈ ಅರ್ಜಿ ವಿಚಾರಣೆ ನಡೆಸುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.