ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಎಲ್ಲ ಪಕ್ಷಗಳ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಬೆಂಬಲಿಸುವ ನಿರ್ಧಾರ ಪ್ರಕಟಿಸೋಣ- ಹೆಚ್. ಡಿ. ದೇವೇಗೌಡ

ಬೆಂಗಳೂರು: ಮೇಕೆದಾಟು ಯೋಜನೆಯನ್ನು ಚುನಾವಣಾ ಪ್ರಣಾಳಿಕೆಯಲ್ಲೇ ವಿರೋಧಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ ಸ್ಟಾಲಿನ್ ಅವರ ನಿಲುವನ್ನು ಮಾಜಿ ಪ್ರಧಾನಿ ಹೆಚ್, ಡಿ. ದೇವೇಗೌಡ ಖಂಡಿಸಿದ್ದು, ಜೆಡಿಎಸ್ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಪ್ರಕಟಿಸುತ್ತೇವೆ. ಇದೇ ರೀತಿ ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂದು ಮನವಿ ಮಾಡುವುದಾಗಿ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಕಠಿಣವಾದ ನಿಲುವು ಪ್ರಕಟಿಸಿದ್ದಾರೆ. ಈ ಬಗ್ಗೆ ಭಯಪಡಬೇಕಾಗಿಲ್ಲ. ನಾವು ಕೂಡಾ ಯೋಜನೆಯನ್ನು ಬೆಂಬಲಿಸುವ ತೀರ್ಮಾನವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸುತ್ತೇವೆ ಎಂದರು. ನಾವು ಮಾತ್ರವಲ್ಲ, ಸರ್ಕಾರ, ಮುಖ್ಯಮಂತ್ರಿ, ಬಿಜೆಪಿ, ಯಡಿಯೂರಪ್ಪ ಎಲ್ಲರೂ ಈ ಚುನಾವಣೆ ಮುಗಿದ ಬಳಿಕ ಮೇಕೆದಾಟು ಜಲಾಶಯ ನಿರ್ಮಿಸುತ್ತೇವೆ ಎಂದು ತೀರ್ಮಾನವನ್ನು ಮಾಡೋಣ ಎಂದು ಹೇಳಿದರು.

ಬೆಂಗಳೂರು ಸೇರಿದಂತೆ ಕಾವೇರಿ ಕಣಿವೆಯ ಒಂಬತ್ತು ಜಿಲ್ಲೆಗಳ 22 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಭೀಕರವಾಗಿದೆ. ಜನರು ಮನೆಗಳ ಬಾಗಿಲಿಗೆ ಬೀಗ ಹಾಕಿಕೊಂಡು ವಲಸೆ ಹೋಗುತ್ತಿದ್ದಾರೆ. ತಮಿಳುನಾಡಿಗೆ ಬಿಡುಗಡೆ ಮಾಡುತ್ತಿರುವ ನೀರಿನ ಪ್ರಮಾಣವನ್ನು ನಿಯಂತ್ರಿಸುವಂತೆ ಹಾಗೂ ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಅನುಮತಿ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಪತ್ರದ ಪ್ರತಿ ಪ್ರದರ್ಶಿಸಿದರು.

No Comments

Leave A Comment