ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ಚಿಕ್ಕಮಗಳೂರು: ಮಂಗನ ಕಾಯಿಲೆಗೆ ಮತ್ತೊಂದು ಬಲಿ, ಚಿಕಿತ್ಸೆ ಫಲಿಸದೆ ವೃದ್ಧೆ ಸಾವು
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದೆ. ಮಂಗನ ಕಾಯಿಲೆಯಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಎಂಬುವರಿಗೆ ಮಂಗನಕಾಯಿಲೆ ತಗುಲಿತ್ತು. ಪರೀಕ್ಷೆಯಲ್ಲಿ ದೃಢಪಟ್ಟ ನಂತರ, ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ರತ್ನ ಎಂಬುವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಮೂಲಕ ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆಗೆ ಮತ್ತೊಂದು ಬಲಿಯನ್ನು ಪಡೆದಂತೆ ಆಗಿದೆ.
ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಂಗನಕಾಯಿಲೆ ಹೆಚ್ಚುತ್ತಿದೆ. ಕೊಪ್ಪ , ಎನ್‌ಆರ್ ಪುರ, ಶೃಂಗೇರಿ ತಾಲೂಕಿನಲ್ಲಿ ಕಾಯಿಲೆ ಹೆಚ್ಚುತ್ತಿದೆ. ಸದ್ಯ ಆಸ್ಪತ್ರೆಯಲ್ಲಿ11 ಕೆಎಫ್‌ಡಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.