ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

Liquor Policy Case: ಬಿಆರ್​ಎಸ್​ ನಾಯಕಿ ಕೆ ಕವಿತಾಗೆ ಏಪ್ರಿಲ್​ 9ರವರೆಗೆ ನ್ಯಾಯಾಂಗ ಬಂಧನ

ದೆಹಲಿ ಮದ್ಯನೀತಿ(Liquor Policy) ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ ಅವರನ್ನು ದೆಹಲಿ ನ್ಯಾಯಾಲಯವು ಏಪ್ರಿಲ್​ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕೆ ಕವಿತಾ ಅವರನ್ನು ಮಾರ್ಚ್ 15 ರಂದು ಹೈದರಾಬಾದ್‌ನಿಂದ ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಫೆಡರಲ್ ಏಜೆನ್ಸಿಯೊಂದಿಗೆ ಅವರ ಕಸ್ಟಡಿಯನ್ನು ಮಾರ್ಚ್ 23 ರಂದು ಇನ್ನೂ ಐದು ದಿನಗಳವರೆಗೆ ವಿಸ್ತರಿಸಲಾಗಿದ್ದು, ಇಂದಿಗೆ ಮುಕ್ತಾಯವಾಗುತ್ತದೆ.

ಆದರೆ ಜಾರಿ ನಿರ್ದೇಶನಾಲಯ ಮಧ್ಯಂತರ ಜಾಮೀನು ಅರ್ಜಿಯಲ್ಲಿ ಉತ್ತರ ನೀಡಲು ಕಾಲಾವಕಾಶ ಕೋರಿತ್ತು. ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ವಿಚಾರಣಾ ನ್ಯಾಯಾಲಯವು ಏಪ್ರಿಲ್ 1 ರಂದು ವಿಚಾರಣೆ ನಡೆಸಲಿದೆ. ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ.ಕವಿತಾ ಅವರು ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಸೇರಿದಂತೆ ಉನ್ನತ ನಾಯಕರೊಂದಿಗೆ ಸಂಚು ರೂಪಿಸಿ ಆಮ್ ಆದ್ಮಿ ಪಕ್ಷದ (AAP) ನಾಯಕರಿಗೆ 100 ಕೋಟಿ ರೂ. ಪಾವತಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿತ್ತು.

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿಯನ್ನು ಕಳೆದ ವಾರ ಇಡಿ ಬಂಧಿಸಿದ್ದು, ಪ್ರಸ್ತುತ ಮಾರ್ಚ್ 23 ರವರೆಗೆ ಅವರು ಏಜೆನ್ಸಿಯ ವಶದಲ್ಲಿರಲಿದ್ದರು. ಇದಾದ ಬಳಿಕ ಕವಿತಾ ಮಗನ ಪರೀಕ್ಷೆಯ ಹೆಸರಿನಲ್ಲಿ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಏಪ್ರಿಲ್​ 1ರಂದು ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಮಾರ್ಚ್​ 15ರಂದು ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಹೈದರಾಬಾದ್​ನಲ್ಲಿ ಇಡಿ ಅಧಿಕಾರಿಗಳು ಕವಿತಾ ಮನೆ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿ, ವಿಚಾರಣೆಗಾಗಿ ದೆಹಲಿಗೆ ಕರೆತಂದಿತ್ತು.

No Comments

Leave A Comment