ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಚೈತ್ರ ಗ್ಯಾಂಗ್​ನಿಂದ ವಂಚನೆ ಪ್ರಕರಣ: ಸಾಕ್ಷಿ ಹೇಳದಂತೆ ವ್ಯಕ್ತಿ ಮೇಲೆ ಹಲ್ಲೆ

ಚಿಕ್ಕಮಗಳೂರು, ಮಾ.27: ಚೈತ್ರಾ(Chaitra) ಗ್ಯಾಂಗ್​ನಿಂದ ಉದ್ಯಮಿಗೆ ಬಿಜೆಪಿ ಟಿಕೆಟ್(BJP Ticket)​ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ತೆಗೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಧನರಾಜ್ ಎಂಬಾತ ಬೇಲ್ ಮೇಲೆ ಜೈಲಿನಿಂದ ಹೊರಬಂದು ಸಾಕ್ಷಿ ಹೇಳಿದರೆ ಕೊಲೆ ಮಾಡುವುದಾಗಿ ಸಲೂನ್ ಮಾಲೀಕ ರಾಮು ಮೇಲೆ ಹಲ್ಲೆ ಮಾಡಿ ಬೆದರಿಕೆ ಹಾಕಿದ ಘಟನೆ ಬೆಳಕಿಗೆ ಬಂದಿದೆ.

ನ್ಯಾಯಕ್ಕಾಗಿ ಎಸ್ಪಿ ಕಚೇರಿ ಮೊರೆ ಹೋದ ರಾಮು ಕುಟುಂಬ

ಕಳೆದ ತಿಂಗಳು ಬೇಲ್ ಮೇಲೆ ಜೈಲಿನಿಂದ ಹೊರಬಂದಿರುವ ಧನರಾಜ್​ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಸೋಮವಾರ(ಮಾ.25) ಕಡೂರಿನ ಹೋಟೆಲ್​ನಲ್ಲಿ ಹಲ್ಲೆ ನಡೆದಿರುವ ಸಂಬಂಧ ರಾಮು ಅವರು ಬೀರೂರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ, ದೂರು ನೀಡಿದರೂ ಕೂಡ ಬೀರೂರು ಠಾಣೆಯ ಪೊಲೀಸರು ಮಾತ್ರ ಪ್ರಕರಣ ದಾಖಲಿಸಿಲ್ಲ. ಈ ಹಿನ್ನಲೆ ನ್ಯಾಯಕ್ಕಾಗಿ ರಾಮು ಕುಟುಂಬ ಎಸ್ಪಿ ಕಚೇರಿ ಮೊರೆ ಹೋಗಿದ್ದಾರೆ .

ಇನ್ನು ಚೈತ್ರಾ ವಂಚನೆ ಪ್ರಕರಣದಲ್ಲಿ ಗೋಪಾಲ್ ಜೀ ಪಾತ್ರ ಸೃಷ್ಟಿಸಿ ಕಡೂರಿನ ರಾಮು ಸಲೂನ್​ನಲ್ಲಿ ಚೆನ್ನಾ ನಾಯ್ಕಗೆ ಧನರಾಜ್ ಮೇಕಪ್ ಮಾಡಿಸಿದ್ದ. ಈ ಹಿನ್ನಲೆ ವಂಚನೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ರಾಮುವಿಗೆ ಸಾಕ್ಷಿ ಹೇಳದಂತೆ ಬೆದರಿಕೆ ಒಡ್ಡಿದ್ದಾನೆ. ಇದೀಗ ಪ್ರಕರಣ ದಾಖಲಿಸದ ಬೀರೂರು ಪೊಲೀಸರ ವಿರುದ್ಧ ರಾಮು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. ಜೊತೆಗೆ ನ್ಯಾಯಕ್ಕಾಗಿ ಎಸ್ಪಿ ವಿಕ್ರಮ್ ಆಮ್ಟೆ ಮೊರೆ ಹೋಗಿದ್ದಾರೆ. ಈ ಕುರಿತು ಚಿಕ್ಕಮಗಳೂರು ನಗರದ ಎಸ್ಪಿ ಕಚೇರಿಯಲ್ಲಿ ದೂರು ನೀಡಿದ್ದಾರೆ.

No Comments

Leave A Comment