ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಮೊದಲ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಸೌದಿ ಅರೇಬಿಯಾ ರಾಷ್ಟ್ರದ ಬ್ಯೂಟಿ ರೂಮಿ ಅಲ್ಕಹ್ತಾನಿ
ಸೌದಿ:ಮಾ, 27:ಮೊಟ್ಟಮೊದಲ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾಗಿಯಾಗಲಿರುವ ಸೌದಿ ಅರೇಬಿಯಾ ಹೊಸ ಇತಿಹಾಸ ನಿರ್ಮಿಸಲು ಸಿದ್ದಗೊಂಡಿದೆ.
27 ವರ್ಷದ ರೂಮಿ ಅಲ್ಕಹ್ತಾನಿ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಸೌದಿ ಅರೇಬಿಯಾವನ್ನು ಪ್ರತಿನಿಧಿಸಲಿದ್ದಾರೆ. ಈ ಮೂಲಕ ಸೌದಿ ಅರೇಬಿಯಾದ ಮಹಿಳಾ ಸಬಲೀಕರಣಕ್ಕೆ ಮಹತ್ವದ ಮೈಲಿಗಲ್ಲು ಸಿಕ್ಕಂತೆ.
ರೂಮಿ ಅಲ್ಕಹ್ತಾನಿ ಅವರು ಮಲೇಷ್ಯಾದಲ್ಲಿನ ಮಿಸ್ ಏಷ್ಯಾ ಮತ್ತು ಮಿಸ್ ಅರಬ್ ಪೀಸ್ ಸೇರಿದಂತೆ ವಿವಿಧ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಸೌದಿ ಅರೇಬಿಯಾವನ್ನು ಪ್ರತಿನಿಧಿಸಿದ್ದರು. ಇದಲ್ಲದೇ ಮಿಸ್ ಮಿಡಲ್ ಈಸ್ಟ್ (ಸೌದಿ ಅರೇಬಿಯಾ) ಮತ್ತು ಮಿಸ್ ಅರಬ್ ವರ್ಲ್ಡ್ ಪೀಸ್ 2021 ರಂತಹ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ರೂಪದರ್ಶಿ ರೂಮಿ ಸೋಮವಾರ ತಮ್ಮ ಇನ್‌ಸ್ಟಾಗ್ರಾಮ್ ಮೂಲಕ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.ಅರೇಬಿಕ್ ಸೇರಿದಂತೆ ಇಂಗ್ಲಿಷ್, ಫ್ರೆಂಚ್ ಮತ್ತು ಬಹು ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡಬಲ್ಲ ರೂಮಿ ಅಲ್ಕಹ್ತಾನಿ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಅರಬ್ ರಾಷ್ಟ್ರವನ್ನು ಪ್ರತಿನಿಧಿಸುವ ಮೂಲಕ ವಿಶ್ವ ಸುಂದರಿ ಪಟ್ಟವನ್ನು ಮುಡಿಗೇರಿಸಿಕೊಳ್ಳುವ ಸಾಧ್ಯತೆ ಇದೆ.