ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಕೊಯಮತ್ತೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಮಲೈ ನಾಮಪತ್ರ ಸಲ್ಲಿಕೆ

ಕೊಯಮತ್ತೂರು:ಮಾ,27; ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸುವ ಮುನ್ನ ಕೊಯಮತ್ತೂರಿನ ಪ್ರಸಿದ್ಧ ಕೊನಿಯಮ್ಮನ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.ದೇವರ ದರ್ಶನದ ಬಳಿಕ ಕೊಯಮತ್ತೂರು ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮತ್ತು ಮಿತ್ರ ಪಕ್ಷಗಳ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ಕೊಯಮತ್ತೂರಿನ ಜನರೆಲ್ಲ ನನ್ನ ಮೇಲೆ ಪ್ರೀತಿ ನೀಡಿದ್ದಾರೆ. ಕೊಯಮತ್ತೂರಿನಲ್ಲಿ ಬಿಜೆಪಿ ಆಡಳಿತಾರೂಢ ಶಕ್ತಿಗಳೊಂದಿಗೆ ಪೈಪೋಟಿ ನಡೆಸುತ್ತಿದೆ ಬಿಜೆಪಿ ಶಾಸಕಿ ವನತಿ ಶ್ರೀ ನಿವಾಸನ್ ಅವರು ಭೂ ಮಂಜೂರಾತಿಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ 4 ಬಾರಿ ಮಾತನಾಡಿದ್ದಾರೆ. ಕೊಯಮತ್ತೂರು ವಿಮಾನ ನಿಲ್ದಾಣ ವಿಸ್ತರಣೆ ಕುರಿತು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ 3 ಬಾರಿ ಪತ್ರ ಬರೆದಿದ್ದಾರೆ ಎಂದರು.

ಕೊಯಮತ್ತೂರು ಅಭಿವೃದ್ಧಿಯಾಗಬಾರದು ಎಂದು ರಾಜ್ಯ ಸರಕಾರ ಅಡ್ಡಿ ಪಡಿಸುತ್ತಿದೆ ಎಂದರು.

No Comments

Leave A Comment