ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

‘ಡಿ.ಕೆ ಸುರೇಶ್ ಅವರ ಗೆಲುವು ಶತಸಿದ್ದ’ – ಸಿಎಂ

ರಾಮನಗರ:ಮಾ, 28. ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌ ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಇವರು ನಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ ಎಂದರು.

ಸರ್ಕಾರ ಬಂದ ದಿನದಿಂದಲೇ ನಾವು ಕೊಟ್ಟ ಮಾತನ್ನು ಈಡೇರಿಸುವ ಕೆಲಸ ಶುರು ಮಾಡಿದೆವು. ಎಂಟೇ ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ. ಹೀಗಾಗಿ ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿಕೊಳ್ಳಿ ಎಂದರು.

ನಾವು ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಕನ್ನಡ ನಾಡಿನ‌ ಜನತೆಯ ಖಾತೆಗೆ ಹಣ ಜಮೆ ಮಾಡುತ್ತಿದ್ದೇವೆ. ಶೂದ್ರರು, ದಲಿತರು, ಮಹಿಳೆಯರು, ಶ್ರಮಿಕರು, ದುಡಿಯುವ ವರ್ಗಗಳ ಎಲ್ಲರ ಮನೆ ಮನೆಯನ್ನೂ ನಮ್ಮ ಗ್ಯಾರಂಟಿಗಳು ತಲುಪಿವೆ. ಇದು ನಮ್ಮ ಬದ್ಧತೆ. ನೀವು ಕೊಟ್ಟ ಒಂದೊಂದು ಓಟಿಗೂ ಘನತೆ ತಂದಿದ್ದೇವೆ ಎಂದರು.

ಬಿಜೆಪಿ-ಜೆಡಿಎಸ್ ಕಾರ್ಯಕರ್ತರು, ಕುಟುಂಬಗಳಿಗೂ ನಮ್ಮ ಸರ್ಕಾರ ಹಣ ಜಮೆ ಮಾಡುತ್ತಿದೆ. ಪಕ್ಷ, ಜಾತಿ, ಧರ್ಮ ಯಾವುದನ್ನೂ ನೋಡದೆ ಇಡೀ ನಾಡಿನ ಜನತೆಗೆ ಅವರ ಕುಟುಂಬಗಳಿಗೆ ಉಚಿತ ಅಕ್ಕಿ, ಉಚಿತ ವಿದ್ಯುತ್ ಜತೆಗೆ ಮಹಿಳೆಯರ ಖಾತೆಗೆ 2 ಸಾವಿರ ರೂಪಾಯಿ, ನಿರುದ್ಯೋಗಿಗಳ ಖಾತೆಗೆ ಭತ್ಯೆಯನ್ನು ಜಮೆ ಮಾಡುತ್ತಿದೆ. ಹೀಗೆ ಕಾಂಗ್ರೆಸ್ ಪಕ್ಷ ಪ್ರತಿಯೊಬ್ಬ ಮತದಾರರ ನಂಬಿಕೆ ಉಳಿಸಿಕೊಂಡಿದೆ ಎಂದು ವಿವರಿಸಿದರು.

ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ. ಡಿ.ಕೆ.ಸುರೇಶ್ ಅವರನ್ನು ಜನ ಗೆಲ್ಲಿಸಲು ತೀರ್ಮಾನಿಸಿ ಆಗಿದೆ ಎಂದರು.

No Comments

Leave A Comment