ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಅಡ್ವಾಣಿ ಸೇರಿ ಐವರಿಗೆ ಪ್ರತಿಷ್ಠಿತ ‘ಭಾರತ ರತ್ನ’; ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಐವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪ್ರತಿಷ್ಠಿತ ‘ಭಾರತ ರತ್ನ’ವನ್ನು ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು.

ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿವಿ ನರಸಿಂಹ ರಾವ್, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್, ಕೃಷಿ ವಿಜ್ಞಾನಿ ಡಾ.ಎಂ.ಎಸ್. ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರದಾನ ಮಾಡಲಾಯಿತು.

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಚರಣ್ ಸಿಂಗ್ ಪರವಾಗಿ ಅವರ ಮೊಮ್ಮಗ ಆರ್ ಎಲ್ ಡಿ ಮುಖ್ಯಸ್ಥ ಜಯಂತ್ ಸಿಂಗ್ ಪ್ರಶಸ್ತಿ ಸ್ವೀಕರಿಸಿದರೆ, ಪಿ. ವಿ. ನರಸಿಂಹ ರಾವ್ ಪರವಾಗಿ ಅವರ ಪತ್ರ ಪಿ.ವಿ. ಪ್ರಭಾಕರ ರಾವ್ ಪ್ರಶಸ್ತಿ ಸ್ವೀಕರಿಸಿದರು.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

No Comments

Leave A Comment