ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಕಾಪು: ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣಿಗೆ ಶರಣಾದ ಮಹಿಳಾ ಕಾನ್‌ಸ್ಟೆಬಲ್
ಕಾಪು:ಮಾ 30: ಕಾಪು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ನೇಣಿಗೆ ಶರಣಾದ ಘಟನೆ ಶನಿವಾರ ಮಾರ್ಚ್ 30 ರಂದು ನಡೆದಿದೆ.
ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಬಾಗಲಕೋಟೆ ಮೂಲದ ಜ್ಯೋತಿ (29) ಮೃತ ಪೊಲೀಸ್ ಆಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.
ಮೃತ ಪೊಲೀಸ್ ಸಿಬ್ಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದು ಪತಿ ಬೆಳಿಗ್ಗೆ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದು ಈ ವೇಳೆ ಪತ್ನಿ ಜ್ಯೋತಿ ನೇಣಿಗೆ ಕೊರಳೊಡ್ಡಿರುವುದನ್ನು ಗಮನಿಸಿದ್ದರು.
ಮೃತರ ಕುಟುಂಬಸ್ಥರು ಆಕೆಯ ಹುಟ್ಟೂರಾದ ಬಾಗಲಕೋಟೆಯಿಂದ ಆಗಮಿಸಿದ ನಂತರ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿದುಬಂದಿದೆ. ಕುಟುಂಬ ಸದಸ್ಯರು ಈಗಾಗಲೇ ಬಾಗಲಕೋಟೆಯಿಂದ ಉಡುಪಿ ಕಡೆಗೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿಯಾಗಿದೆ.