ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಬ್ರಹ್ಮಾವರ: ರಿಕ್ಷಾ ಚಾಲಕನ ಸಾವಿನ ಸುತ್ತ ಅನುಮಾನದ ಹುತ್ತ.
ಉಡುಪಿ: ಬಾಡಿಗೆಗೆ ಹೋದ ಆಟೋ ಚಾಲಕನೋರ್ವ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಮಾಯಾಡಿ ಎಂಬಲ್ಲಿ ನಡೆದಿದೆ.
ಮೂಡುತೋನ್ಸೆ ಗ್ರಾಮದ ಮಹಮ್ಮದ್ ಫೈಜಲ್ (36) ಮೃತಪಟ್ಟ ಆಟೋ ಚಾಲಕ. ಇವರು ಮಾ. 27ರಂದು ರಾತ್ರಿ ಬಾಡಿಗೆಗೆ ಹೋಗಲಿಕ್ಕೆ ಇದೆಯೆಂದು ಮನೆಯಿಂದ ತೆರಳಿದ್ದರು. ಬಳಿಕ ಮನೆಗೆ ಬಾರದೆ, ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇದೀಗ ಅವರ ಶವ ಉಪ್ಪೂರು ಗ್ರಾಮದ ಮಾಯಾಡಿ ಎಂಬಲ್ಲಿ ಸುವರ್ಣ ನದಿಯಲ್ಲಿ ಪತ್ತೆಯಾಗಿದೆ. ಫೈಜಲ್ ಅವರು ಸುವರ್ಣ ನದಿಯ ನೀರಿನಲ್ಲಿ ಬಿದ್ದು ಮೃತಪಟ್ಟಿದ್ದು, ಅವರ ಸಾವಿನಲ್ಲಿ ಸಂಶಯವಿದೆ ಎಂದು ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ ಪೊಲೀಸರು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.