ಆದರೆ ಈ ಬಾರಿಯ ಚುನಾವಣೆಯಲ್ಲಿ ಲೆಕ್ಕಾಚಾರ ತಲೆಕೆಳಗಾಗಿವೆ, ಜನತಾ ದಳ (ಜಾತ್ಯತೀತ) ಈಗ ಬಿಜೆಪಿಯ ಮಿತ್ರ ಪಕ್ಷವಾಗಿದ್ದು, ಕುಮಾರಸ್ವಾಮಿ ಅವರು ಎನ್‌ಡಿಎ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಸುಮಲತಾ ಅವರನ್ನು ಸಮಾಧಾನ ಪಡಿಸಲು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಶುಕ್ರವಾರ ಅವರನ್ನು ಭೇಟಿ ಮಾಡಿದ್ದು, ಅಂತಿಮ ನಿರ್ಧಾರ ತೆಗೆದುಕೊಳ್ಳುವ ಶನಿವಾರ ತಮ್ಮ ಬೆಂಬಲಿಗರೊಂದಿಗೆ ಸಮಾಲೋಚಿಸಿ ತಿಳಿಸಿದ್ದಾಗಿ ಸುಮಲತಾ ಹೇಳಿದ್ದಾರೆ.
ಅಭಿಮಾನಿಗಳ ಆಶೀರ್ವಾದದಿಂದ ತಮ್ಮ ರಾಜಕೀಯ ಜೀವನ ಪ್ರಾರಂಭವಾಯಿತು. ತಮ್ಮ ಬೆಂಬಲಕ್ಕೆ ನಿಂತ ಅಂಬರೀಶ್ ಅವರ ಅಭಿಮಾನಿಗಳನ್ನು ಶ್ಲಾಘಿಸಿದರು. ಕಳೆದ 30 ವರ್ಷಗಳಿಂದ ಅಂಬರೀಶ್ ಅವರನ್ನು ಬೆಂಬಲಿಸುತ್ತಿರುವ ಜನರು ನನ್ನೊಂದಿಗಿದ್ದಾರೆ, ಅವರು ತಮ್ಮ ನೋವನ್ನು ನನ್ನೊಂದಿಗೆ ಹಂಚಿಕೊಂಡರು. ನನಗೆ ರಾಜಕೀಯ ಅನುಭವ ಇಲ್ಲದಿದ್ದರೂ ಚುನಾವಣೆ ಎದುರಿಸಲು ಆತ್ಮವಿಶ್ವಾಸ ತುಂಬಿದವರು ಅವರು ಎಂದು ಸುಮಲತಾ ಹೇಳಿದರು.
ಅಂಬರೀಶ್ ಅವರ ಅಭಿಮಾನಿಗಳ ಗುಂಪನ್ನು ಹೊರತುಪಡಿಸಿದರೆ ಯಾವುದೇ ದೊಡ್ಡ ವ್ಯಕ್ತಿಗಳ ಹೆಸರು ನನ್ನ ಹಿಂದೆ ಇರಲಿಲ್ಲ, ಆದರೆ ಮಂಡ್ಯದ ಜನರು ಅದರ ಬಗ್ಗೆ ತಲೆಕೆಡಿಸಿಕೊಳ್ಳದೆ ನನ್ನನ್ನು ಪೂರ್ಣ ಹೃದಯದಿಂದ ಬೆಂಬಲಿಸಿದ್ದಾರೆ ಎಂದು ಸುಮಲತಾ ತಿಳಿಸಿದರು.