ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಏಪ್ರಿಲ್‌ 3ಕ್ಕೆ ಮತ್ತೊಂದು ಸಭೆ: ಮಂಡ್ಯದಲ್ಲೇ ನಿರ್ಧಾರ ಪ್ರಕಟ; ಬಿಜೆಪಿಯಿಂದ ರಾಜ್ಯಸಭೆಗೆ ಸುಮಲತಾ?

ಬೆಂಗಳೂರು: ಮಂಡ್ಯದ ಜನತೆ ನನ್ನ ಶಕ್ತಿ, ಆವತ್ತಿಗೂ ನನ್ನ ಪರ ಇದ್ದರು, ಇವತ್ತಿಗೂ ಇದ್ದಾರೆ. ನಾನು ಇದ್ದರೂ-ಬಿದ್ದರೂ, ಗೆದ್ದರೂ-ಸೋತರೂ ಮಂಡ್ಯ ಬಿಡಲ್ಲ. ಮಂಡ್ಯದಲ್ಲೇ ನನ್ನ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.

ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಏಪ್ರಿಲ್ 3 ರಂದು ಮಂಡ್ಯದಲ್ಲಿ ನನ್ನ ನಿರ್ಧಾರವನ್ನು ಬಹಿರಂಗಗೊಳಿಸುತ್ತೇನೆ ಏಕೆಂದರೆ ನಾನು ಯಾವುದೇ ನಿರ್ಧಾರವನ್ನು ಮಂಡ್ಯದ ಮತದಾರರಿಗೆ ತಿಳಿಸುವುದು ನನ್ನ ಕರ್ತವ್ಯ ಎಂದಿದ್ದಾರೆ.

ಸುಮಲತಾ ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಾಹ್ಯ ಬೆಂಬಲದೊಂದಿಗೆ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿದ್ದರು. ಈ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮೊಮ್ಮಗ ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದರು.

ಆದರೆ ಈ ಬಾರಿಯ ಚುನಾವಣೆಯಲ್ಲಿ ಲೆಕ್ಕಾಚಾರ ತಲೆಕೆಳಗಾಗಿವೆ, ಜನತಾ ದಳ (ಜಾತ್ಯತೀತ) ಈಗ ಬಿಜೆಪಿಯ ಮಿತ್ರ ಪಕ್ಷವಾಗಿದ್ದು, ಕುಮಾರಸ್ವಾಮಿ ಅವರು ಎನ್‌ಡಿಎ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಸುಮಲತಾ ಅವರನ್ನು ಸಮಾಧಾನ ಪಡಿಸಲು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಶುಕ್ರವಾರ ಅವರನ್ನು ಭೇಟಿ ಮಾಡಿದ್ದು, ಅಂತಿಮ ನಿರ್ಧಾರ ತೆಗೆದುಕೊಳ್ಳುವ ಶನಿವಾರ ತಮ್ಮ ಬೆಂಬಲಿಗರೊಂದಿಗೆ ಸಮಾಲೋಚಿಸಿ ತಿಳಿಸಿದ್ದಾಗಿ ಸುಮಲತಾ ಹೇಳಿದ್ದಾರೆ.

ಅಭಿಮಾನಿಗಳ ಆಶೀರ್ವಾದದಿಂದ ತಮ್ಮ ರಾಜಕೀಯ ಜೀವನ ಪ್ರಾರಂಭವಾಯಿತು. ತಮ್ಮ ಬೆಂಬಲಕ್ಕೆ ನಿಂತ ಅಂಬರೀಶ್ ಅವರ ಅಭಿಮಾನಿಗಳನ್ನು ಶ್ಲಾಘಿಸಿದರು. ಕಳೆದ 30 ವರ್ಷಗಳಿಂದ ಅಂಬರೀಶ್ ಅವರನ್ನು ಬೆಂಬಲಿಸುತ್ತಿರುವ ಜನರು ನನ್ನೊಂದಿಗಿದ್ದಾರೆ, ಅವರು ತಮ್ಮ ನೋವನ್ನು ನನ್ನೊಂದಿಗೆ ಹಂಚಿಕೊಂಡರು. ನನಗೆ ರಾಜಕೀಯ ಅನುಭವ ಇಲ್ಲದಿದ್ದರೂ ಚುನಾವಣೆ ಎದುರಿಸಲು ಆತ್ಮವಿಶ್ವಾಸ ತುಂಬಿದವರು ಅವರು ಎಂದು ಸುಮಲತಾ ಹೇಳಿದರು.

ಅಂಬರೀಶ್ ಅವರ ಅಭಿಮಾನಿಗಳ ಗುಂಪನ್ನು ಹೊರತುಪಡಿಸಿದರೆ ಯಾವುದೇ ದೊಡ್ಡ ವ್ಯಕ್ತಿಗಳ ಹೆಸರು ನನ್ನ ಹಿಂದೆ ಇರಲಿಲ್ಲ, ಆದರೆ ಮಂಡ್ಯದ ಜನರು ಅದರ ಬಗ್ಗೆ ತಲೆಕೆಡಿಸಿಕೊಳ್ಳದೆ ನನ್ನನ್ನು ಪೂರ್ಣ ಹೃದಯದಿಂದ ಬೆಂಬಲಿಸಿದ್ದಾರೆ ಎಂದು ಸುಮಲತಾ ತಿಳಿಸಿದರು.

kiniudupi@rediffmail.com

No Comments

Leave A Comment