ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಗುಜರಾತ್ ನ ದ್ವಾರಕಾದಲ್ಲಿ ನಾಲ್ವರು ಸಜೀವ ದಹನ

ದ್ವಾರಕಾ: ಗುಜರಾತ್‌ ರಾಜ್ಯದ ದ್ವಾರಕಾದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹತ್ತಿಕೊಂಡಿದ್ದು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಏಳು ತಿಂಗಳ ಹೆಣ್ಣು ಮಗು, ಪತಿ-ಪತ್ನಿ ಹಾಗೂ ಅಜ್ಜಿ ಸೇರಿ ನಾಲ್ವರು ಸಜೀವ ದಹನವಾಗಿದ್ದಾರೆ.

ಇಂದು ನಸುಕಿನ ಜಾವ 3ರಿಂದ 4 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬೆಂಕಿಯಿಂದ ದಟ್ಟ ಹೊಗೆ ಆವರಿಸಿದ್ದರಿಂದ ಮನೆಯಲ್ಲಿದ್ದವರು ಉಸಿರುಗಟ್ಟಿ ಬೆಂಕಿಯಲ್ಲೇ ಸಜೀವ ದಹನವಾಗಿದ್ದಾರೆ.

ಮೃತರನ್ನು ಪವನ್ ಕಮಲೇಶ್ ಉಪಾಧ್ಯಾಯ (30 ವರ್ಷ), ಭಾವನ ಉಪಾಧ್ಯಾಯ (27 ವರ್ಷ), ಧ್ಯಾನಾ ಉಪಾಧ್ಯಾಯ (7 ತಿಂಗಳ ಬಾಲಕಿ) ಮತ್ತು ಪವನ್ ಅವರ ತಾಯಿ ಭಾಮಿನಿಬೆನ್ ಉಪಾಧ್ಯಾಯ ಎಂದು ಗುರುತಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಬೆಂಕಿಯ ನಂತರ ಮನೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಂಡ ನಂತರ ನಿರ್ಗಮನ ಬಾಗಿಲನ್ನು ಪತ್ತೆಹಚ್ಚಲು ವಿಫಲವಾದ ಕಾರಣ ಕುಟುಂಬ ಸದಸ್ಯರು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ ಸಿ ಪಟೇಲ್ ತಿಳಿಸಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿಗೆ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದಾಗ ದಂಪತಿ, ಅವರ 8 ತಿಂಗಳ ಮಗಳು ಮತ್ತು ವ್ಯಕ್ತಿಯ ತಾಯಿ ಮನೆಯ ಮೊದಲ ಮಹಡಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾರೆ.

ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಮನೆಯ ನೆಲ ಅಂತಸ್ತಿನ ಕೊಠಡಿಯಲ್ಲಿ ಮಲಗಿದ್ದ ಅಜ್ಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರು ಹೇಳಿದರು.

ಅಧಿಕ ಬಿಸಿಯಾದ ನಂತರ ಏರ್ ಕಂಡಿಷನರ್‌ನಲ್ಲಿ ಸ್ಫೋಟಗೊಂಡ ಕಾರಣ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ವಿಧಿವಿಜ್ಞಾನ ತಜ್ಞರು ಬೆಂಕಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ತೊಡಗಿದ್ದಾರೆ

No Comments

Leave A Comment