ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಕ್ರಷರ್ ಮಾಲೀಕನ ಮನೆ ಮೇಲೆ ಐಟಿ ದಾಳಿ: 1 ಕೋಟಿ ರೂ. ನಗದು, 800 ಗ್ರಾಂ ಚಿನ್ನಾಭರಣ ವಶಕ್ಕೆ
ಬೆಂಗಳೂರು ಗ್ರಾಮಾಂತರ, ಮಾ.31: ಕ್ರಷರ್ ಮಾಲೀಕನ ಮನೆ ಮೇಲೆ ಐಟಿ(IT) ಇಲಾಖೆ ಅಧಿಕಾರಿಗಳು ಇಂದು(ಮಾ.31) ದಾಳಿ ನಡೆಸಿದ್ದು, 1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರ ಆಪ್ತ ಸಹಾಯಕ ಮಂಜುನಾಥ್ ಎಂಬುವವರ ಅಳಿಯ ಆಗಿರುವ ಲೋಕೇಶ್, ಕೆಲದಿನಗಳ ಹಿಂದೆ ಗಡಿಭಾಗದ ಚೆಕ್ಪೋಸ್ಟ್ನಲ್ಲಿ 10 ಲಕ್ಷ ಹಣದ ಜೊತೆ ಸಿಕ್ಕಿಬಿದ್ದಿದ್ದರು. ಈ ಹಿನ್ನಲೆ ಅನುಮಾನದಿಂದ ಐಟಿ ಇಲಾಖೆ ಡಿಡಿ ವಿಷ್ಣುಪ್ರಸಾದ್ ನೇತೃತ್ವದಲ್ಲಿ 6 ಅಧಿಕಾರಿಗಳು ತಮಿಳುನಾಡಿನ ಹೊಸೂರಿನಲ್ಲಿರುವ ಲೋಕೇಶ್ ನಿವಾಸದ ಮೇಲೆ ದಾಳಿ ನಡೆಸಿದಾಗ ದಾಖಲೆ ಇಲ್ಲದೆ ಸಂಗ್ರಹಿಸಿದ್ದ ಚಿನ್ನಾಭರಣ, ನಗದು ಪತ್ತೆಯಾಗಿದೆ.