ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಉಡುಪಿ: ನಾಪತ್ತೆಯಾಗಿದ್ದ ಆಟೋರಿಕ್ಷಾ ಚಾಲಕ ಸಂಶಯಾಸ್ಪದ ಸಾವು

ಉಡುಪಿ: ಮಾ,31: ಮಾ. 27ರಂದು ನಾಪತ್ತೆಯಾಗಿದ್ದ ಆಟೋರಿಕ್ಷಾ ಚಾಲಕ ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದು, ಮೃತದೇಹವು ಬ್ರಹ್ಮಾವರ ಉಪ್ಪೂರು ಮಾಯಾಡಿ ಎಂಬಲ್ಲಿರುವ ಸ್ವರ್ಣಾ ನದಿಯಲ್ಲಿ ಪತ್ತೆಯಾಗಿದೆ.

ಮೂಡು ತೋನ್ಸೆ ಗ್ರಾಮದ ಮುಹಮ್ಮದ್ ಫೈಝಲ್(36) ಎಂಬುವವರು ಮಾ. 27ರಂದು ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಮನೆಯಿಂದ ಹೊರಟವರು ಬಳಿಕ ನಾಪತ್ತೆಯಾಗಿದ್ದರು. ನಂತರ ಅವರಿಗಾಗಿ ಹುಡುಕಾಟ ನಡೆಸಿದಾಗ ಮನೆ ಬಳಿಯ ಮೈದಾನದ ಸಮೀಪ ಪತ್ತೆಯಾಗಿತ್ತು. ಬಳಿಕ ಮುಹಮ್ಮದ್ ಫೈಝಲ್ ನಾಪತ್ತೆಯಾಗಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ ಮುಹಮ್ಮದ್ ಫೈಝಲ್ ಅವರ ಮೃತದೇಹವು ಸ್ವರ್ಣಾ ನದಿಯಲ್ಲಿ ಪತ್ತೆಯಾಗಿದೆ. ಇನ್ನು ಅವರ ಸಾವಿನ ಕುರಿತು ಹಲವಾರು ಸಂಶಯವಿರುವುದಾಗಿ ನೀಡಿರುವ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

No Comments

Leave A Comment