ಮಂಡ್ಯ ಸಂಸದೆ ಸುಮಲತಾ ಅವರನ್ನು ಭೇಟಿ ಮಾಡಿದ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು : ಮಂಡ್ಯ ಸಂಸದೆ ಸುಮಲತಾ ಅವರನ್ನು ಮಾಜಿ ಸಿಎಂ, ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ.
ಕುಮಾರಸ್ವಾಮಿ ಹಾಗೂ ಸುಮಲತಾ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ನಿನ್ನೆಯಷ್ಟೇ ಸಂಸದೆ ಸುಮಲತಾ ತಮ್ಮ ರಾಜಕೀಯ ನಿರ್ಧಾರವನ್ನು ಮಂಡ್ಯದಲ್ಲಿಯೇ ತಿಳಿಸುತ್ತೇನೆ ಎಂದು ಪ್ರಕಟಿಸಿದ್ದರು.