ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆ: ಪ್ರತಿ ಯುನಿಟ್ಗೆ 1.10 ರೂ. ಕಡಿತ, ಇಂದಿನಿಂದಲೇ ಜಾರಿ
ಬೆಂಗಳೂರು: ಲೋಕಸಭೆ ಚುನಾವಣೆ ಸಮಯದಲ್ಲಿ ಕರ್ನಾಟಕ ರಾಜ್ಯ ವಿದ್ಯುತ್ಚ್ಛಕ್ತಿ ನಿಯಂತ್ರಣ ಆಯೋಗ(KERC)ಎಲ್ಲ ವರ್ಗದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದೆ.
ಕೆಇಆರ್ ಸಿ ವಿದ್ಯುತ್ ದರ ಇಳಿಕೆ ಮಾಡಿ ಸೋಮವಾರ ಆದೇಶ ಹೊರಡಿಸಿದ್ದು, 100 ಯುನಿಟ್ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯುನಿಟ್ಗೆ 1.10 ರೂ. ಕಡಿಮೆ ಮಾಡಲಾಗಿದೆ.
ಗೃಹ ಬಳಕೆಯಲ್ಲಿ 100 ಯುನಿಟ್ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುವವರಿಗೆ ಪ್ರತಿ ಯುನಿಟ್ಗೆ 1.10 ರೂ. ಕಡಿಮೆ ಮಾಡಲಾಗಿದೆ. ಈ ಮೂಲಕ 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಯಾಗಿದೆ.
2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ದರ ಇಂದಿನಿಂದಲೇ(ಏಪ್ರಿಲ್ 01) ಜಾರಿಗೆ ಬರಲಿದೆ. ಎಲ್ಲಾ ಎಸ್ಕಾಂಗಳಿಗೂ ಏಕರೂಪದ ಗೃಹಬಳಕೆ ವಿದ್ಯುತ್ ದರ ನಿಗದಿ ಮಾಡಿದೆ.
ಮೊದಲು 100ಕ್ಕಿಂತ ಹೆಚ್ಚು ಯುನಿಟ್ ವಿದ್ಯುತ್ ಬಳಕೆ ಮಾಡುವವರಿಗೆ ಪ್ರತಿ ಯುನಿಟ್ಗೆ 7 ರೂ. ನಿಗದಿ ಮಾಡಲಾಗಿತ್ತು. ಇದೀಗ 7 ರೂ. ಬದಲಿಗೆ ಪ್ರತಿ ಯುನಿಟ್ಗೆ 5.90 ರೂ. ಮಾತ್ರ ಶುಲ್ಕ ವಿಧಿಸಲಾಗಿದೆ. ಇನ್ನು 100 ಯುನಿಟ್ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರು ಈಗಾಗಲೆ ಪ್ರತಿ ಯುನಿಟ್ಗೆ 4.75 ರೂ. ಪಾವತಿಸುತ್ತಿದ್ದಾರೆ.
ಇನ್ನು ರಾಜ್ಯ ಸರ್ಕಾರ 200 ಯುನಿಟ್ ಒಳಗೆ ಬಳಸುವವರಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುವುದರಿಂದ ಈ ಸೌಲಭ್ಯಕ್ಕೆ ನೋಂದಾಯಿಸಿಕೊಂಡವರಿಗೆ ದರ ಇಳಿಕೆಯ ಪ್ರಯೋಜನ ಸಿಗುವುದಿಲ್ಲ.