ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಗೆ ಸುಪ್ರೀಂನಿಂದ ಜಾಮೀನು
ನವದೆಹಲಿ: ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಎಪಿ ಸಂಸದ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರು ಸಲ್ಲಿಸಿದ್ದ ಅರ್ಜಿಗೆ ಜಾರಿ ನಿರ್ದೇಶನಾಲಯ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಜಾಮೀನು ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಇಡಿಗೆ ತೀಕ್ಷ್ಣವಾದ ಪ್ರಶ್ನೆಗಳನ್ನು ಕೇಳಿದ್ದು, ಸಿಂಗ್ ಬಂಧನದಲ್ಲಿರಲು ಕಾರಣವೇನು? ಮತ್ತು ಇಷ್ಟು ದಿನ ಬಂಧನದಲ್ಲಿದ್ದಿದ್ದು ಹೇಗೆ ಸಹಾಯಕವಾಯಿತು ಎಂದು ಪ್ರಶ್ನಿಸಿತು. ಅಲ್ಲದೆ ಸಂಜಯ್ ಸಿಂಗ್ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಲು ಸರಿಯಾದ ಕಾರಣ, ಲಿಖಿತ ಸಮರ್ಥನೆಯೊಂದಿಗೆ ಬರುವಂತೆ ಇಡಿ ವಕೀಲರಿಗೆ ಸೂಚಿಸಿತ್ತು.
ರಾಜ್ಯಸಭೆಯ ಸದಸ್ಯರಾಗಿರುವ ಸಂಜಯ್ ಸಿಂಗ್ ಅವರು ಕಳೆದ ಆರು ತಿಂಗಳಿನಿಂದ ಜೈಲಿನಲ್ಲಿದ್ದರು.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಕಳೆದ ವರ್ಷ ಅಕ್ಟೋಬರ್ 4 ರಂದು ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು ಮತ್ತು ಸತತ 11 ಗಂಟೆಗಳ ವಿಚಾರಣೆ ಬಳಿಕ ಅವರನ್ನು ಬಂಧಿಸಿತ್ತು.