ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಮಂಗಳೂರು ; ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ನಾಮಪತ್ರ ಸಲ್ಲಿಕೆ.

ಮಂಗಳೂರು; ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್. ಪದ್ಮರಾಜ್‌ ಅವರು ಚುನಾವಣಾ ಅಧಿಕಾರಿಗಳಿಗೆ ತಮ್ಮ ನಾಮ ಪತ್ರವನ್ನು ಸಲ್ಲಿಸಿದ್ದಾರೆ. ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಬೃಹತ್ ಮೆರವಣಿಗೆ ನಡೆಸಿ ತಮ್ಮ ಉಮೇದ್ವಾರಿಕೆಯನ್ನು ಸಲ್ಲಿಸಿದ್ದಾರೆ.

ಮೆರವಣಿಗೆ ಆರಂಭಕ್ಕೂ ಮೊದಲು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಾಮಪತ್ರಕ್ಕೆ ಪೂಜೆ ಸಲ್ಲಿಸಿದ್ದಾರೆ. ನಾರಾಯಣ ಗುರುಗಳ ಆಶೀರ್ವಾದ ಪಡೆದು ತಮ್ಮ ಗುರುಗಳಾದ ಹಿರಿಯ ಕಾಂಗ್ರೆಸ್‌ ನಾಯಕ ಬಿ.ಜನಾರ್ಧನ ಪೂಜಾರಿಯವರ ಆಶೀರ್ವಾದ ಪಡೆದುಕೊಂಡಿದ್ದಾರೆ.

ಬಳಿಕ ಕುದ್ರೋಳಿಯಿಂದ ಆರಂಭವಾದ ಬೃಹತ್ ಮೆರವಣಿ ಕಾರ್‌ ಸ್ಟ್ರೀಟ್‌ ಮೂಲಕವಾಗಿ ಗಣಪತಿ ಹೈಸ್ಕೂಲ್ ಮಾರ್ಗವಾಗಿ ಸಾಗಿ ಮುಖ್ಯರಸ್ತೆಗೆ ಆಗಮಿಸಿದೆ. ಬಳಿಕ ಮುಖ್ಯ ರಸ್ತೆಯಲ್ಲಿ ನೆಹರೂ ಮೈದಾನದ ಬಳಿ ಮೆರವಣಿಗೆ ಅಂತ್ಯವಾಗಿದೆ.

ನಾಮಪತ್ರ ಸಲ್ಲಿಕೆ ಹಿನ್ನಲೆಯಲ್ಲಿ ನಡೆದಿದ್ದ ಈ ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ದಿನೇಶ್ ಗುಂಡೂರಾವ್‌, ಚುನಾವಣಾ ಉಸ್ತುವಾರಿ ಬಿ.ರಮಾನಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಬಂಡಾರಿ ಹಾಗೂ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮೊದಲಾದವರು ಸಾತ್ ನೀಡಿದ್ದಾರೆ.

ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಕಾರ್ಯಕರ್ತರು ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಿಂದ ನೂರು ಮೀಟರ್ ದೂರದ ವರೆಗೂ ನಿಶೇಧಾಜ್ಞೇ ಜಾರಿಯಲ್ಲಿ ಇದ್ದ ಹಿನ್ನಲೆಯಲ್ಲಿ ಮೆರವಣಿಗೆಯನ್ನು ಆರ್‌.ಟಿ.ಒ ಕಚೇರಿ ಸಮೀಪ ಕೊನೆಗೊಳಿಸಲಾಗಿತ್ತು.

ಬಳಿಕ ಅಲ್ಲಿಂದ ನಡೆದುಕೊಂಡು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಪದ್ಮರಾಜ್‌ ಅವರು ಕೈ ನಾಯಕರ ಜೊತೆ ತನ್ನ ಉಮೇದ್ವಾರಿಕೆಯನ್ನು ಸಲ್ಲಿಸಿದ್ದಾರೆ.

No Comments

Leave A Comment