ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್
ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಬುಧವಾರ ತೀರ್ಪು ಕಾಯ್ದಿರಿಸಿದೆ.
ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರು ತಮ್ಮ ಬಂಧನ ಮತ್ತು ಇಡಿ ಕಸ್ಟಡಿಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.
ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಸೋಮವಾರ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯನ್ನು “ಕಿಂಗ್‌ಪಿನ್” ಎಂದು ಇಡಿ ಆರೋಪಿಸಿದ್ದು, ಎಎಪಿ ನಾಯಕ “ತಪ್ಪಿಸಿಕೊಳ್ಳುವ ಉತ್ತರ” ನೀಡಿದ್ದಾರೆ ಮತ್ತು ತನಿಖೆಗೆ ಸಂಬಂಧಿಸಿದ ಮಾಹಿತಿಯನ್ನು ಮರೆಮಾಚುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಮರುದಿನ, ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಆರೋಪಿ ದೆಹಲಿ ಸಿಎಂ ಅನ್ನು ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಗೆ ನೀಡಿದ್ದರು. ನಂತರ ಕೇಜ್ರಿವಾಲ್ ಅವರ ಇಡಿ ಕಸ್ಟಡಿ ಅವಧಿಯನ್ನು ಏಪ್ರಿಲ್ 1 ರವರೆಗೆ ನಾಲ್ಕು ದಿನಗಳ ಕಾಲ ವಿಸ್ತರಿಸಿತ್ತು.
ಕಸ್ಟಡಿ ವಿಚಾರಣೆ ಸಮಯದಲ್ಲಿ ಐದು ದಿನಗಳಲ್ಲಿ ಕೇಜ್ರಿವಾಲ್ ಅವರ ಹೇಳಿಕೆಗಳನ್ನು ದಾಖಲಿಸಲಾಗಿದ್ದು, ಅವರು ತಪ್ಪಿಸಿಕೊಳ್ಳುವ ಉತ್ತರ ನೀಡುತ್ತಿದ್ದಾರೆ ಎಂದು ಇಡಿ ಹೊಸ ರಿಮಾಂಡ್ ಅರ್ಜಿಯಲ್ಲಿ ಹೇಳಿತ್ತು. ಕಸ್ಟಡಿ ಅವಧಿಯಲ್ಲಿ ಇತರ ಮೂವರ ಹೇಳಿಕೆಗಳನ್ನು ಸಹ ದಾಖಲಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ತಿಳಿಸಿದೆ.