Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ವಯನಾಡ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಮಪತ್ರ

ವಯನಾಡ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ನಾಮಪತ್ರ ಸಲ್ಲಿಸಿದರು.

ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಚುನಾವಣಾಧಿಕಾರಿಯೂ ಆಗಿರುವ ವಯನಾಡ್ ಜಿಲ್ಲಾಧಿಕಾರಿಗೆ ಇಂದು ನಾಮಪತ್ರ ಸಲ್ಲಿಸಿದರು.

ಇಂದು ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ವಯನಾಡಿಗೆ ಆಗಮಿಸಿದ ರಾಹುಲ್ ಗಾಂಧಿ, ನಾಮಪತ್ರ ಸಲ್ಲಿಸುವ ಮುನ್ನ ಇಲ್ಲಿನ ಕಲ್ಪೆಟ್ಟಾದಿಂದ ಸಿವಿಲ್ ಸ್ಟೇಷನ್ ವರೆಗೆ ರೋಡ್ ಶೋ ನಡೆಸಿದರು.

ರೋಡ್‌ಶೋ ನಂತರ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ, ರಾಜ್ಯದ ಹೈರೇಂಜ್ ಜಿಲ್ಲೆಯಲ್ಲಿ ಅನೇಕ ಜೀವಗಳನ್ನು ಬಲಿತೆಗೆದುಕೊಂಡಿರುವ ಮಾನವ-ಪ್ರಾಣಿ ಸಂಘರ್ಷ ಸೇರಿದಂತೆ ಎಲ್ಲಾ ವಿಷಯಗಳಲ್ಲೂ ತಾವು ವಯನಾಡಿನ ಜನರೊಂದಿಗೆ ಇರುವುದಾಗಿ ಹೇಳಿದರು.

ವಯನಾಡ್ ನನ್ನ ಮನೆ ಇದ್ದಂತೆ, ಇಲ್ಲಿನ ಜನರೇ ನನ್ನ ಕುಟುಂಬ. ವಯನಾಡ್ ಜನತೆಯ ಅಚಲ ಬೆಂಬಲಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ನಾವು ‘ನ್ಯಾಯ್’ ನ ಹೊಸ ಯುಗಕ್ಕೆ ಕಾಲಿಡುತ್ತಿರುವಾಗ, ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸುವ ನನ್ನ ಸಮರ್ಪಣೆಯನ್ನು ಪುನರುಚ್ಚರಿಸಲು ಬಯಸುತ್ತೇನೆ” ಎಂದು ರಾಹುಲ್ ಗಾಂಧಿ ಹೇಳಿದರು.

No Comments

Leave A Comment