Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ, ಡಿಕೆ ಸುರೇಶ್ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು: ಡಿಕೆಶಿ

ಬೆಂಗಳೂರು: ಕರ್ನಾಟಕದಲ್ಲಿ ‘ಮೋದಿ ಅಲೆ’ ಇಲ್ಲ. ಹೀಗಾಗಿ ಕಾಂಗ್ರೆಸ್ ಆರಾಮದಾಯಕವಾಗಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪ ಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಬಿಜೆಪಿ ತನ್ನ ನಾಲ್ಕು ವರ್ಷಗಳ ಆಡಳಿತದಲ್ಲಿ ರಾಜ್ಯದಲ್ಲಿ ಏನನ್ನೂ ಮಾಡಿಲ್ಲ ಮತ್ತು ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಡಿಸಿಎಂ ಕಿಡಿಕಾರಿದರು.

“ಕರ್ನಾಟಕದ ಮಟ್ಟಿಗೆ ಕಾಂಗ್ರೆಸ್ ಅತ್ಯಂತ ಆರಾಮದಾಯಕ ಸ್ಥಿತಿಯಲ್ಲಿದೆ. ರಾಜ್ಯದಲ್ಲಿ ಮೋದಿ ಅಲೆ ಇಲ್ಲ. ಏಕೆಂದರೆ ಕಳೆದ 10 ವರ್ಷಗಳ ಆಡಳಿತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಡಿಕೆ ಶಿವಕುಮಾರ್ ಅವರು ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಕರ್ನಾಟಕದಿಂದ ಕೋಟ್ಯಂತರ ರೂಪಾಯಿ ತೆರಿಗೆ ಸಂಗ್ರಹಿಸಿದ್ದರೂ, 236 ತಾಲ್ಲೂಕುಗಳ ಪೈಕಿ 230 ತಾಲ್ಲೂಕುಗಳು ಭೀಕರ ಬರಗಾಲ ಎದುರಿಸುತ್ತಿದ್ದರೂ ರಾಜ್ಯಕ್ಕೆ ಯಾವುದೇ ಬರ ಪರಿಹಾರ ನೀಡಿಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಖ್ಯಾತ ಹೃದ್ರೋಗ ತಜ್ಞ ಹಾಗೂ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ವಿರುದ್ಧ ತಮ್ಮ ಸಹೋದರ ಹಾಗೂ ಮೂರು ಬಾರಿ ಸಂಸದ ಡಿ.ಕೆ.ಸುರೇಶ್ ಅವರು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ-ಜೆಡಿ(ಎಸ್) ಚುನಾವಣಾ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, ಇದು ವಿಫಲ ಮೈತ್ರಿಯಾಗಿದ್ದು, ಜನರು ಅವರನ್ನು ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ.

No Comments

Leave A Comment