ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಬರ್ಬರ ಹತ್ಯೆ
ಚಿಕ್ಕೋಡಿ/ಅಥಣಿ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂಬವರನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ಅಣ್ಣಪ್ಪ ಬಸಪ್ಪ ನಿಂಬಾಳರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಅಣ್ಣಪ್ಪ ಖೀಳೆಗಾಂವ್ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷರಾಗಿದ್ದರು. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ಘಟನೆ ನಡೆದಿದೆ.
ಕೊಲೆಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಹಣಕಾಸಿನ ವಿಚಾರವಾಗಿ ಹತ್ಯೆ ಮಾಡಿರುವ ಶಂಕೆಗಳು ವ್ಯಕ್ತವಾಗಿವೆ. ಇದೀಗ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಮೃತ ದುರ್ದೈವಿ ಖೀಳೆಗಾಂವ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಜೊತೆಗೆ ಅಥಣಿ ಶಾಸಕ ಲಕ್ಷ್ಮಣ್ ಸವದಿ ಮತ್ತು ಕಾಗವಾಡ ಶಾಸಕ ರಾಜು ಕಾಗೆ ಅವರ ಆಪ್ತ ಬಳಗದಲ್ಲಿ ಇವರು ಒಬ್ಬರಾಗಿ ಗುರುತಿಸಿಕೊಂಡಿದ್ದರು. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಿಂಗಳ ಹಿಂದಷ್ಟೇ ಸಂಸದ ಕಲಬುರಗಿಯ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಬೆಂಬಲಿಗ, ಬಿಜೆಪಿ ಮುಖಂಡ ಗಿರೀಶ್ ಚಕ್ರ ಎಂಬವರನ್ನು ದುಷ್ಕರ್ಮಿಗಳು ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ಕೊಲೆ ಮಾಡಿದ್ದರು. ಇದೀಗ ಅಂಥದ್ದೇ ಘಟನೆ ಮರುಕಳಿಸಿದೆ.