ಹರಿಯಾಣ, ಗೋವಾ, ಲಡಾಖ್‌ಗೆ ಹೊಸ ರಾಜ್ಯಪಾಲರ ನೇಮಕ....Poster ಅಂಟಿಸುವ ಮುನ್ನ ಎಚ್ಚರ; Bengaluru Auto Driversಗೆ ಮತ್ತೆ ಶಾಕ್ ಕೊಟ್ಟ RTO ಅಧಿಕಾರಿಗಳು! 5 ಸಾವಿರ ದಂಡ!
ಕುಂದಾಪುರ: ಬಟ್ಟೆ ಅಂಗಡಿಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಗಳ ಬಂಧನ
ಕುಂದಾಪುರ:ಏ 4: ಬಟ್ಟೆ ಅಂಗಡಿಯೊಂದರಲ್ಲಿ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಗಂಗೊಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಗಂಗೊಳ್ಳಿಯ ಸುಲ್ತಾನ್ ಮೊಹಲ್ಲಾ ನಿವಾಸಿ ನದೀಮ್ (27), ಗಂಗೊಳ್ಳಿಯ ಜಾಮೀಯಾ ಮೊಹಲ್ಲಾ ನಿವಾಸಿ ಮೊಹಮ್ಮದ್ ಆರೀಫ್(18), ಭಟ್ಕಳದ ಚೌಥನಿ ರಸ್ತೆ ಸಮೀಪದ ನಿವಾಸಿ ಮೊಹಮ್ಮದ್ ರಯ್ಯಾನ್ (18) ಬಂಧಿತ ಆರೋಪಿಗಳು. ಇನ್ನು ಕಳ್ಳತನ ಕೃತ್ಯದಲ್ಲಿ ಭಾಗಿಯಾದ ಕಾನೂನು ಸಂಘರ್ಷಕ್ಕೊಳಗಾದ ಇಬ್ಬರು ಬಾಲಕರನ್ನು ವಶಕ್ಕೆ ಪಡೆದು ಬಾಲನ್ಯಾಯ ಮಂಡಳಿ ಎದುರು ಪೊಲೀಸರು ಹಾಜರು ಪಡಿಸಿದ್ದಾರೆ.
ಬಂಧಿತರಿಂದ ಮೊಬೈಲ್ ಫೋನ್, 52,000 ರೂ. ಹಣ ಹಾಗೂ 1 ಬೈಕ್ ಹಾಗೂ 1 ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗಂಗೊಳ್ಳಿಯ ಜಾಮೀಯಾ ಕಾಂಪ್ಲೆಕ್ಸ್ ನಲ್ಲಿರು ಬಟ್ಟೆ ಅಂಗಡಿಯೊಂದರಿಂದ ಮಾರ್ಚ್ 31 ರಂದು ಆರೋಪಿಗಳು ಅಂಗಡಿಯ ಕ್ಯಾಶ್ ಕೌಂಟರ್ ನಲ್ಲಿದ್ದ 90,000 ನಗದು ಹಾಗೂ ಮೊಬೈಲ್ ಫೋನ್ ಕಳ್ಳತನ ಮಾಡಿ ಪರಾರಿಯಾಗಿದ್ದರು.