Log In
BREAKING NEWS >
``````````````ನಮ್ಮೆಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ,ಓದುಗರಿಗೆ ಕರಾವಳಿ ಕಿರಣ ಡಾಟ್ ಕಾ೦ನ ವತಿಯಿ೦ದ "ಚ೦ದ್ರಮಾನ ಯುಗಾದಿ"ಯ ಶುಭಾಶಯಗಳು `````````````

ರಾಜ್ಯಸಭೆ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸೋನಿಯಾ ಗಾಂಧಿ

ನವದೆಹಲಿ:ಏ .4: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ರಾಜ್ಯಸಭೆ ಸದಸ್ಯೆಯಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಯ್‌ ಬರೇಲಿಯಿಂದ ಸಂಸದೆಯಾಗಿ ಆಯ್ಕೆಯಾಗುತ್ತಿದ್ದ ಸೋನಿಯಾ ಗಾಂಧಿ ಅವರು, ಮೊದಲ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿರುತ್ತಾರೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಅವರಿಂದ ತೆರವಾದ ಸ್ಥಾನಕ್ಕೆ ರಾಜಸ್ಥಾನದಿಂದ ಆಯ್ಕೆಯಾದ ಸೋನಿಯಾಗಾಂಧಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇಂದು ಸಂಸತ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೋನಿಯಾ ಗಾಂಧಿ ಅವರಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಪ್ರಮಾಣ ವಚನ ಭೋದಿಸಿದರು. ಇನ್ನು ಸೋನಿಯಾ ಗಾಂಧಿ ಅವರೊಂದಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್,ಆರ್ ಪಿಎನ್ ಸಿಂಗ್‌,ಕರ್ನಾಟಕದ ಕಾಂಗ್ರೆಸ್ ನಾಯಕರಾದ ಅಜಯ್ ಮಾಕನ್, ಸೈಯದ್ ನಾಸೀರ್ ಹುಸೇನ್, ಪಶ್ಚಿಮ ಬಂಗಾಳದ ಬಿಜೆಪಿ ಸದಸ್ಯ ಸಾಮಿಕ್ ಭಟ್ಟಾಚಾರ್ಯ, ವೈಎಸ್ ಆರ್‌ಸಿಪಿ ನಾಯಕರಾದ ಗೋಲಾ ಬಾಬು ರಾವ್, ಮೇಧಾ ರಘುನಾಥ್ ರೆಡ್ಡಿ ಮತ್ತು ಯೆರುಂ ವೆಂಕಟ್ ಸುಬ್ಬಾ ರೆಡ್ಡಿ ಅವರಿಗೂ ಪ್ರಮಾಣ ವಚನ ಭೋದಿಸಲಾಯಿತು.

No Comments

Leave A Comment