ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
Loksabha Election 2024: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್‌ಗೆ ‘Z’ ಕೆಟಗರಿ ಭದ್ರತೆ
ನವದೆಹಲಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (CEC Rajiv Kumar) ಅವರ ಭದ್ರತೆಯನ್ನು Z ಕೆಟಗರಿಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳ ತಿಳಿಸಿವೆ.
ಮೂಲಗಳ ಪ್ರಕಾರ ಗುಪ್ತಚರ ವರದಿಯ ಆಧಾರದ ಮೇಲೆ ಗೃಹ ಸಚಿವಾಲಯ, ಮುಖ್ಯ ಚುನಾವಣಾ ಆಯುಕ್ತರಿಗೆ Z ಕೆಟಗರಿ ಭದ್ರತೆಯನ್ನು ಒದಗಿಸಲಾಗಿದೆ. ರಾಜೀವ್ ಕುಮಾರ್ ಅವರ ಭದ್ರತೆಗಾಗಿ ಭದ್ರತಾ ಶಿಷ್ಠಾಚಾರಗಳ ಅಡಿಯಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
‘Z’ ಕೆಟಗರಿ ಭದ್ರತೆ
ಕೇಂದ್ರ ಗೃಹ ಸಚಿವಾಲಯವು ಈ ಕಾರ್ಯಕ್ಕಾಗಿ ಸುಮಾರು 40-45 ಸಿಬ್ಬಂದಿಗಳ ತುಕಡಿಯನ್ನು ಒದಗಿಸುವ ಮೂಲಕ ರಾಜೀವ್ ಕುಮಾರ್ ಭದ್ರತಾ ಮೇಲ್ವಿಚಾರಣೆಯನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆಗೆ ವಹಿಸಿಕೊಟ್ಟಿದೆ. ಈ ‘Z’ ಕೆಟಗರಿ ಭದ್ರತಾ ತಂಡದಲ್ಲಿ ಸಿಆರ್‌ಪಿಎಫ್ ಕಮಾಂಡೋಗಳು ಸೇರಿದಂತೆ ಒಟ್ಟು 33 ಭದ್ರತಾ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಅವರ ನಿವಾಸದಲ್ಲಿ 10 ಶಸ್ತ್ರಸಜ್ಜಿತ ಸ್ಟ್ಯಾಟಿಕ್ ಗಾರ್ಡ್‍ಗಳನ್ನು ಈ ತಂಡ ಒಳಗೊಂಡಿರುತ್ತದೆ.
6 ವೈಯಕ್ತಿಕ ಭದ್ರತಾ ಅಧಿಕಾರಿಗಳು (ಪಿಎಸ್‍ಒಗಳು) ಇಡೀ ದಿನದ ರಕ್ಷಣೆಯನ್ನು ಒದಗಿಸುತ್ತಾರೆ. 12 ಸಶಸ್ತ್ರ ಬೆಂಗಾವಲು ಕಮಾಂಡೋಗಳು ಮೂರು ಪಾಳಿಗಳಲ್ಲಿ ಕೆಲಸ ಮಾಡುತ್ತಾರೆ. ಹೆಚ್ಚುವರಿಯಾಗಿ, ಪ್ರತಿ ಶಿಫ್ಟ್‌ಗೆ ಇಬ್ಬರು ವೀಕ್ಷಕರು ಮತ್ತು ಮೂವರು ತರಬೇತಿ ಪಡೆದ ಚಾಲಕರು ಎಲ್ಲಾ ಸಮಯದಲ್ಲೂ ರಾಜೀವ್ ಕುಮಾರ್ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇರಲಿದ್ದಾರೆ ಎಂದು ಹೇಳಲಾಗಿದೆ.
ತೃಣಮೂಲ ಕಾಂಗ್ರೆಸ್‍ನಂತಹ (Trinamool Congress) ವಿರೋಧ ಪಕ್ಷಗಳು ಚುನಾವಣಾ ಆಯೋಗದ (Election Commission )ವಿರುದ್ಧ ಪ್ರತಿಭಟಿಸುತ್ತಿವೆ. ಅಲ್ಲದೇ ಲೋಕಸಭೆ ಚುನಾವಣೆಗೂ ಮುನ್ನ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆಯ ಹಿನ್ನಲೆಯಲ್ಲಿ ರಾಜೀವ್ ಕುಮಾರ್ ಅವರ ಭದ್ರತಾ ಸ್ಥಾನಮಾನವನ್ನು ಹೆಚ್ಚಿಸುವ ನಿರ್ಧಾರ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸಂಜೀವ್ ಕುಮಾರ್ 1984ರ ಬ್ಯಾಚ್‌ನ ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದು, ಅವರು ಮೇ 15, 2022 ರಂದು 25 ನೇ CEC ಆಗಿ ಅಧಿಕಾರ ವಹಿಸಿಕೊಂಡರು. ಅವರನ್ನು ಸೆಪ್ಟೆಂಬರ್ 1, 2020 ರಂದು ಚುನಾವಣಾ ಆಯೋಗದಲ್ಲಿ ಚುನಾವಣಾ ಆಯುಕ್ತರಾಗಿ ನೇಮಿಸಲಾಯಿತು.