ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ. ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ,ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಅದಮಾರು ಮಠದ ಅತಿಥಿಗೃಹದಲ್ಲಿನ “ಸುಧಾಮ”: ಉಪಹಾರ ಮಂದಿರ ಉದ್ಘಾಟನೆ

ಉಡುಪಿ ಅದಮಾರು ಮಠದ ಹಿಂಭಾಗದಲ್ಲಿರುವ ಅದಮಾರು ಮಠದ ಅತಿಥಿಗೃಹದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಉಪಹಾರ ಮಂದಿರ “ಸುಧಾಮ”ವನ್ನು (ಕ್ಯಾಂಟೀನ್ ) ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ಮಠದ ಅಧಿಕಾರಿಗಳಾದ ಗೋವಿಂದರಾಜ್ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

No Comments

Leave A Comment