Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ರಾತ್ರೋರಾತ್ರಿ ದಳಪತಿಗಳಿಗೆ ಬಿಗ್ ಶಾಕ್ ಕೊಟ್ಟ’ಕನಕಪುರ ಬಂಡೆ’ ಡಿಕೆಶಿ: ಚನ್ನಪಟ್ಟಣದ 400ಕ್ಕೂ ಹೆಚ್ಚು ಜೆಡಿಎಸ್ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ!

ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ರಾಜಕೀಯ ನಾಯಕರ ಪ್ರಚಾರದ ಜೊತೆಗೆ ಪಕ್ಷಾಂತರ ಕೂಡ ಜೋರಾಗಿದೆ. ಕರ್ನಾಟಕ ರಾಜಕೀಯದಲ್ಲಿ ಪ್ರಭಾವಿ ನಾಯಕ ಡಿಸಿಎಂ ಡಿ ಕೆ ಶಿವಕುಮಾರ್ ರಾತ್ರೋರಾತ್ರಿ ಜೆಡಿಎಸ್ ನಾಯಕರಿಗೆ ಬಿಗ್‌ ಶಾಕ್‌ ಕೊಟ್ಟಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಭಾಗ್ಯಗಳ ಘೋಷಣೆಯಿಂದ ಭರ್ಜರಿ ಗೆಲುವು ಕಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಗೆ ಟಕ್ಕರ್ ಕೊಡಲು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ-ಜೆಡಿಎಸ್ ಗೆ ಕನಕಪುರ ಬಂಡೆ ಚನ್ನಪಟ್ಟಣದಲ್ಲಿ ಶಾಕ್ ಕೊಟ್ಟಿದ್ದಾರೆ.

ಸದ್ದಿಲ್ಲದೆ ಕಳೆದ ರಾತ್ರಿ ಚನ್ನಪಟ್ಟಣದ ಜೆಡಿಎಸ್ ನಾಯಕರಾದ ಅಕ್ಕೂರುದೊಡ್ಡಿ ಶಿವಣ್ಣ ಸೇರಿದಂತೆ ಬರೋಬ್ಬರಿ 400 ಕ್ಕೂ ಮುಖಂಡರನ್ನು ಡಿ ಕೆ ಶಿವಕುಮಾರ್ ಕಾಂಗ್ರೆಸ್‌ ಪಕ್ಷಕ್ಕೆ ಬರಮಾಡಿಕೊಂಡಿದ್ದು, ದಳಪತಿಗಳಿ ಬಿಗ್‌ ಶಾಕ್‌ ನೀಡಿದ್ದಾರೆ.

ಪಕ್ಷದ ಶಾಲು, ಧ್ವಜ ನೀಡಿ ಬರಮಾಡಿಕೊಂಡ ಡಿ ಕೆ ಶಿವಕುಮಾರ್: ಕೆಪಿಸಿಸಿ ಕಚೇರಿಯಲ್ಲಿ ಚನ್ನಪಟ್ಟಣದ ಜೆಡಿಎಸ್ ನಾಯಕರಾದ ಅಕ್ಕೂರುದೊಡ್ಡಿ ಶಿವಣ್ಣ ಸೇರಿದಂತೆ ನಾಯಕರು ಹಾಗೂ ಕಾರ್ಯಕರ್ತರನ್ನು ನಿನ್ನೆ ರಾತ್ರಿ ಕಾಂಗ್ರೆಸ್ ಪಕ್ಷಕ್ಕೆ ಡಿ ಕೆ ಶಿವಕುಮಾರ್ ಪಕ್ಷದ ಶಾಲು ಹೊದಿಸಿ, ಧ್ವಜ ನೀಡಿ ಬರಮಾಡಿಕೊಂಡರು.

ಬಳಿಕ ಮಾತನಾಡಿದ ಶಿವಕುಮಾರ್, ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಕುಟುಂಬದ ಸದಸ್ಯರನ್ನು ಬಿಜೆಪಿಯಿಂದ ಕಣಕ್ಕೆ ಇಳಿಸಿ, ಜೆಡಿಎಸ್ ಪಕ್ಷವನ್ನು ಹೇಗೆ ಕಟ್ಟುತ್ತಾರೆ ಎಂದು ಪ್ರಶ್ನಿಸಿದರು. ದೇವೇಗೌಡರು ಪಕ್ಷದ ಅಧಿಕಾರವನ್ನು ಕುಮಾರಸ್ವಾಮಿ ಅವರಿಗೆ ಕೊಟ್ಟ ಪರಿಣಾಮ ಆ ಪಕ್ಷ ಈ ಸ್ಥಿತಿ ತಲುಪಿದೆ. ಈಗ ತಮ್ಮನ್ನು ಅಧಿಕಾರದಿಂದ ಕೆಳಗೆ ಇಳಿಸಿದವರನ್ನೇ ಕರೆದುಕೊಂಡು ಒಕ್ಕಲಿಗರ ಮಠಕ್ಕೆ ಹೋಗಿದ್ದಾರೆ. ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ತಮ್ಮ ಪಕ್ಷದ ಕಾರ್ಯಕರ್ತರಿಗೆ ಒಂದು ಸಣ್ಣ ಅಧಿಕಾರವನ್ನಾದರೂ ಕೊಟ್ಟರಾ? ಅಧಿಕಾರ ಇದ್ದಾಗಲೇ ಏನು ಮಾಡಲಿಲ್ಲ. ಕಾರ್ಯಕರ್ತರು ಇಲ್ಲದೆ ಯಾವ ಪಕ್ಷ ಇರಲು ಸಾಧ್ಯ ಎಂದು ಪ್ರಶ್ನಿಸಿದರು.

ಚನ್ನಪಟ್ಟಣದವರಿಗೆ ರಾಜಕಾರಣ ಹೊಸದಲ್ಲ. ಆದರೆ ಇಂದು ನಡೆಯುತ್ತಿರುವ ರಾಜಕಾರಣ ನೋಡಿದರೆ ಯಾರನ್ನು ನಂಬಬೇಕು, ಯಾರನ್ನು ಬಿಡಬೇಕು ಎಂದು ಅರ್ಥವಾಗುತ್ತಿಲ್ಲ. ಕುಮಾರಸ್ವಾಮಿ, ಯೋಗೇಶ್ವರ್ ಅವರು ಆಡಿದ್ದ ಮಾತುಗಳು ಒಂದೇ ಎರಡೇ. ಅವರು ಈಗ ಏನಾದರೂ ಮಾಡಿಕೊಳ್ಳಲಿ. ಚನ್ನಪಟ್ಟಣದಲ್ಲಿ ದಳ ಮತ್ತು ಬಿಜೆಪಿ ಒಂದಾಗಲು ಸಾಧ್ಯವೇ ಎಂದು ಡಿ ಕೆ ಶಿವಕುಮಾರ್‌ ಪ್ರಶ್ನಿಸಿದರು.

ಚುನಾವಣೆ ಮುಗಿಯುವ ವೇಳೆಗೆ ಕಾಂಗ್ರೆಸ್ ಅವರಿಗೆ ಏನೂ ಮಾಡದೇ ಇದ್ದರೂ ಪರಸ್ಪರ ಒಬ್ಬರಿಗೊಬ್ಬರು ಯಾವ ಗತಿ ಮಾಡಬೇಕೋ ಮಾಡುತ್ತಾರೆ. ಇವರ ರಾಜಕೀಯ ಸ್ವಾರ್ಥಕ್ಕೆ ಕಾರ್ಯಕರ್ತರು ಏನಾಗಬೇಕು. ಅವರು ಯಾರಿಗಾಗಿ ದುಡಿದರು, ಹೋರಾಟ ಮಾಡಿದರು ಕಳೆದ ಒಂದು ತಿಂಗಳಲ್ಲಿ ಸುಮಾರು ಹತ್ತು ಸಾವಿರ ಕಾರ್ಯಕರ್ತರು ಬಿಜೆಪಿ ಹಾಗೂ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ಹೇಳಿದರು.

No Comments

Leave A Comment