ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ; ಬಿಜೆಪಿಯಿಂದ ನೋಟಿಸ್ ಸಾಧ್ಯತೆ
ಶಿವಮೊಗ್ಗ, ಏಪ್ರಿಲ್ 12: ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಇಂದು (ಏ.12) ನಾಮಪತ್ರ ಸಲ್ಲಿಸಿದರು. ಬೃಹತ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಉಮೇದುವಾರಿಕೆ ಸಲ್ಲಿಸಿದರು. ಪುತ್ರ ಕಾಂತೇಶ್ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಬಿಜೆಪಿ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಆದರೆ ಕೆಎಸ್ ಈಶ್ವರಪ್ಪ ಅವರು ಹೇಳಿಕೊಂಡತೆ “ರಾಜ್ಯ ಬಿಜೆಪಿಯಲ್ಲಿನ ಕುಟುಂಬ ರಾಜಕಾರಣದ ವಿರೋಧಿಸಿ ಸ್ಪರ್ಧೆ ಮಾಡುತ್ತಿದ್ದೇನೆ” ಎಂದಿದ್ದಾರೆ.
ಈ ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ನಾನು ನರೇಂದ್ರ ಮೋದಿಯವರಿಗೆ ಬೆಂಬಲ ನೀಡುತ್ತೇನೆ ಎಂದು ಕೆಎಸ್ ಈಶ್ವರಪ್ಪ ಅವರು ಈಗಾಗಲೆ ಹೇಳಿದ್ದಾರೆ. ಇನ್ನು ಪಕ್ಷದ ವಿರುದ್ಧ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿರುವ ಕೆಎಸ್ ಈಶ್ವರಪ್ಪ ಅವರಿಗೆ ಬಿಜೆಪಿ ನೋಟಿಸ್ ನೀಡುವ ಸಾಧ್ಯತೆ ಇದೆ.
ಚುನಾವಣೆ ಬಳಿಕ ಬಿಜೆಪಿಯಲ್ಲಿ ಶುದ್ದೀಕರಣ ಆಗುವ ವಿಶ್ವಾಸ ಇದೆ: ಈಶ್ವರಪ್ಪ
ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಪ್ರತಿ ಮನೆ ಮನೆಗೆ ಹೋಗಿ ಈಶ್ವರಪ್ಪ ಏಕೆ ಚುನಾವಣೆಗೆ ನಿಂತಿದ್ದಾರೆ, ಏನು ಅನ್ಯಾಯ ಆಗಿದೆ ಅಂತ ನಮ್ಮ ಕಾರ್ಯಕರ್ತರು ತಿಳಿಸುತ್ತಾರೆ. ಅಪ್ಪ ಮಕ್ಕಳ ಕೈಯಲ್ಲಿ ಪಕ್ಷ ಏಕೆ ಇದೆ? ಚುನಾವಣೆ ಬಳಿಕ ನಂತರ ಬಿಜೆಪಿಯಲ್ಲಿ ಕೆಲವು ಬದಲಾವಣೆ ಆಗುತ್ತದೆ. ಪಕ್ಷ ಶುದ್ದೀಕರಣ ಆಗುವ ವಿಶ್ವಾಸ ಇದೆ ಎಂದು ನಾಮಪತ್ರ ಸಲ್ಲಿಕೆ ಬಳಿಕ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದರು.