ಮಹಾರಾಷ್ಟ್ರದ ಪುಣೆ ಬಳಿಯ ಇಂದ್ರಾಯಣಿ ನದಿ ಸೇತುವೆಯೊಂದು ಭಾನುವಾರ ಕುಸಿದು ಬಿದಿದ್ದು, ನಾಲ್ವರು ಪ್ರವಾಸಿಗರು ಮೃತಪಟ್ಟಿರುವುದಾಗಿ ವರದಿಯಾಗಿದೆ......

ವಿಜಯಪುರ: ಕಾರು ಹಾಗೂ ಲಾರಿ ಮುಖಮುಖಿ ಡಿಕ್ಕಿ – ನಾಲ್ವರು ಸ್ಥಳದಲ್ಲೇ ಸಾವು

ವಿಜಯಪುರ: ಬಬಲೇಶ್ವರ  ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ವಿಜಯಪುರ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅರ್ಜುನ ಕುಶಾಲಸಿಂಗ್ ರಜಪೂತ (32), ರವಿನಾಥ ಪತ್ತಾರ (52), ಪುಷ್ಪಾ ರವಿನಾಥ ಪತ್ತಾರ (40), ಮೇಘರಾಜ ರಜಪೂತ (12) ಮೃತ ದುರ್ದೈವಿಗಳು.

 

ಕಾರಿನಲ್ಲಿ ನಾಲ್ವರು ವಿಜಯಪುರದಿಂದ ಜಮಖಂಡಿಯಲ್ಲಿರುವ ದೇವಸ್ಥಾನಕ್ಕೆ ಹೊರಟಿದ್ದರು.  ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಜಮಖಂಡಿಯಿಂದ ವಿಜಯಪುರಕ್ಕೆ ಬರುತ್ತಿತ್ತು. ಅರ್ಜುಣಗಿ ಗ್ರಾಮದ ಬಳಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

kiniudupi@rediffmail.com

No Comments

Leave A Comment