Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಕೊಡಗು: ಶ್ರೀಮಂಗಲ ವನ್ಯಜೀವಿ ಅಭಯಾರಣ್ಯ ವಲಯದಲ್ಲಿ ಕಾಡಾನೆ ದಾಳಿ, ವೃದ್ಧ ಸಾವು

ಕೊಡಗು: ಇಲ್ಲಿನ ಶ್ರೀಮಂಗಲ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಸೋಮವಾರ ಕಾಡಾನೆ ದಾಳಿಗೆ 50 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಎಂಬಲ್ಲಿ ಬೆಳಗ್ಗೆ 6.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

‘ಮಡಿಕೇರಿ ವನ್ಯಜೀವಿ ವಿಭಾಗದ ಶ್ರೀಮಂಗಲ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ನಮ್ಮ ಅಧಿಕಾರಿಗಳು ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ’ ಎಂದು ಹಿರಿಯ ಅರಣ್ಯಾಧಿಕಾರಿ ತಿಳಿಸಿದ್ದಾರೆ.

ಘಟನೆಯ ನಂತರ ಸ್ಥಳೀಯ ನಿವಾಸಿಗಳಲ್ಲಿ ಭಯ ಆವರಿಸಿದ್ದು, ಆನೆಗಳ ಹಾವಳಿ ಹೆಚ್ಚುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

No Comments

Leave A Comment