ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ವೃದ್ಧೆ!
ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ.
ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ (83) ಮೃತಪಟ್ಟವರು. ಸಾವಿನ ಮುನ್ನ ಹಕ್ಕು ಚಲಾಯಿಸಿದ ನಿರ್ವಹಿಸಿದ ಹಿರಿಯ ನಾಗರಿಕರ ಈ ಕರ್ತವ್ಯಪ್ರಜ್ಞೆಗೆ ಶ್ಲಾಘನೆ ವ್ಯಕ್ತವಾಗಿದೆ.
ಯಶೋಧಾ ಅವರು ಬ್ರಹ್ಮಾವರ ತಾಲೂಕು ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿಯಾಗಿದ್ದು, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿಯಾಗಿದ್ದಾರೆ. ಹಿರಿಯ ನಾಗರಿಕರಿಗಾಗಿ ರೂಪಿಸಲಾಗಿರುವ ಮನೆಯಿಂದ ಮತ ಕಾರ್ಯಕ್ರಮದಡಿ ಮನೆಯಿಂದಲೇ ಮತದಾನ ಮಾಡಿದ್ದರು.
ಮತದಾನಕ್ಕೂ ಮುನ್ನ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ಮತದಾನ ಮಾಡಿಯೇ ಆಸ್ಪತ್ರೆಗೆ ತೆರಳಲು ಅವರು ನಿಶ್ಚಯಿಸಿದ್ದರು. ಮತದಾನ ಮಾಡಿದ ಬಳಿಕವೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ತೆರಳಿ ಅಲ್ಲಿ ದಾಖಲಾಗಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಯಶೋದಮ್ಮ ಮೃತಪಟ್ಟಿದ್ದಾರೆ. ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.