ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ, ಮಹಿಳೆಯರಿಗೆ 1 ಲಕ್ಷ, 20 ಸಾವಿರ ರೂ. ನೀಡುತ್ತೇವೆ: ರಾಹುಲ್ ಗಾಂಧಿ
ಮಂಡ್ಯ: ಕೇಂದ್ರ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ರೈತರ ಸಾಲ ಮನ್ನಾ ಮಾಡುತ್ತೇವೆ ಮತ್ತು ರಾಜ್ಯದಲ್ಲಿ ಬಡ ಮಹಿಳೆಯರಿಗೆ ಈಗಾಗಲೇ ನೀಡುತ್ತಿರುವ 24 ಸಾವಿರಕ್ಕೆ 1 ಲಕ್ಷ ರೂ. ಸೇರಿಸಿ 1 ಲಕ್ಷದ 20 ಸಾವಿರ ರೂಪಾಯಿ ನೀಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಭರವಸೆ ನೀಡಿದ್ದಾರೆ.
ಇಂದು ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಿಸುತ್ತೇವೆ. ಸರ್ಕಾರಿ, ಅರೆ ಸರ್ಕಾರಿ ನೌಕರರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉದ್ಯೋಗ ಭದ್ರತಾ ಯೋಜನೆ ಜಾರಿ ಮಾಡುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನುಡಿದಂತೆ ನಡೆದಿದ್ದೇವೆ. 5 ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬಡವರಿಗೆ, ಮಹಿಳೆಯರಿಗೆ, ಯುವಕರಿಗೆ ಅನುಕೂಲವಾಗಿದೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ರೈತರಿಗೆ ನ್ಯಾಯ ಸಿಕ್ಕಿಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಮಾಡಿದ್ದು, ಈ ವೇಳೆ ರೈತರ ಸಂಕಷ್ಟ ನೋಡಿದ್ದೇನೆ ಎಂದರು.
ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ “ಸಂವಿಧಾನಕ್ಕಾಗಿ ಹೋರಾಟ” ನಡೆಸುತ್ತಿದೆ ಮತ್ತು ಇನ್ನೊಂದು ಕಡೆ “ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಹಾಳು ಮಾಡಲು” ಬಿಜೆಪಿ ಹೋರಾಟ ನಡೆಸುತ್ತಿದೆ ಎಂದರು.
ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ, ಅದು “ಸಾಮಾನ್ಯ ನಾಗರಿಕರು, ರೈತರು, ಕಾರ್ಮಿಕರು ಮತ್ತು ವ್ಯಾಪಾರಿಗಳ ಸರ್ಕಾರವಾಗಿರುತ್ತದೆ” ಎಂದು ರಾಹುಲ್ ಗಾಂಧಿ ಅವರು ಚುನಾವಣೆಗಾಗಿ ತಮ್ಮ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯನ್ನು ಎತ್ತಿ ತೋರಿಸಿದರು.
ಬಿಜೆಪಿ ಸರ್ಕಾರ ಕೇವಲ 22 ರಿಂದ 25 ಶ್ರೀಮಂತರಿಗಾಗಿ ಕೆಲಸ ಮಾಡುತ್ತಿದೆ. ಆದರೆ ಕಾಂಗ್ರೆಸ್ ಸಾಮಾನ್ಯ ನಾಗರಿಕರು, ರೈತರು, ಕಾರ್ಮಿಕರು ಮತ್ತು ವ್ಯಾಪಾರಿಗಳಿಗಾಗಿ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತದೆ ಎಂದು ಹೇಳಿದರು.
ಮಂಡ್ಯದಲ್ಲಿ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಎಂದೇ ಖ್ಯಾತರಾಗಿರುವ ವೆಂಕಟರಮಣೇಗೌಡ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.