Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಲೋಕಸಭಾ ಚುನಾವಣೆ 2024: 102 ಕ್ಷೇತ್ರಗಳಲ್ಲಿ ಈ ವರೆಗೂ ಶೇ.40 ರಷ್ಟು ಮತದಾನ

ನವದೆಹಲಿ: ಲೋಕಸಭಾ ಚುನಾವಣೆ 2024 ರ ಮೊದಲ ಹಂತದ ಮತದಾನ ಆರಂಭಗೊಂಡಿದ್ದು 102 ಕ್ಷೇತ್ರಗಳಲ್ಲಿ ಈ ವರೆಗೂ ಶೇ.40 ರಷ್ಟು ಮತದಾನ ನಡೆದಿದೆ.

21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 18 ನೇ ಲೋಕಸಭೆಗೆ ಮತದಾನ ಪ್ರಗತಿಯಲ್ಲಿದೆ. ಮೊದಲ ಹಂತದಲ್ಲಿ ತಮಿಳುನಾಡು (39), ರಾಜಸ್ಥಾನ (12), ಉತ್ತರ ಪ್ರದೇಶ (8), ಮಧ್ಯಪ್ರದೇಶ (6), ಉತ್ತರಾಖಂಡ (5), ಅರುಣಾಚಲ ಪ್ರದೇಶ (2), ಮೇಘಾಲಯ (2), ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು (1), ಮಿಜೋರಾಂ (1) ), ನಾಗಾಲ್ಯಾಂಡ್ (1), ಪುದುಚೇರಿ (1), ಸಿಕ್ಕಿಂ (1) ಮತ್ತು ಲಕ್ಷದ್ವೀಪ (1). ಅಲ್ಲದೆ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5, ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಮಣಿಪುರದಲ್ಲಿ ಎರಡು ಮತ್ತು ತ್ರಿಪುರಾ, ಜಮ್ಮು ಮತ್ತು ಕಾಶ್ಮೀರ ಮತ್ತು ಛತ್ತೀಸ್‌ಗಢದಲ್ಲಿ ತಲಾ 1 ಸ್ಥಾನಗಳಲ್ಲಿ ಚುನಾವಣೆ ನಡೆಯುತ್ತಿದೆ.

ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಈ ಲೋಕಸಭಾ ಚುನಾವಣೆಯ ಜೊತೆಗೆ ವಿಧಾನಸಭೆಗಳಿಗೂ ಚುನಾವಣೆ ನಡೆಯುತ್ತಿದೆ. ಇವುಗಳ ಪೈಕಿ ಅರುಣಾಚಲ ಪ್ರದೇಶದ 60 ಸ್ಥಾನಗಳು ಮತ್ತು ಸಿಕ್ಕಿಂ 32 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

ತಮಿಳುನಾಡಿನಲ್ಲಿ ಮಧ್ಯಾಹ್ನ 1 ಗಂಟೆ ವರೆಗೆ ಶೇ.39.5 ರಷ್ಟು ಮತದಾನ ನಡೆದಿದ್ದರೆ, ರಾಜಸ್ಥಾನದಲ್ಲಿ ಶೇ.33.7 ರಷ್ಟು, ಉತ್ತರ ಪ್ರದೇಶದಲ್ಲಿ ಶೇ.37, ಮಧ್ಯಪ್ರದೇಶದಲ್ಲಿ ಶೇ.44.4 ರಷ್ಟು ಮತದಾನ ನಡೆದಿದೆ. ಮಹಾರಾಷ್ಟ್ರದಲ್ಲಿ ಅತಿ ಕಡಿಮೆ ಅಂದರೆ, 30.6 ರಷ್ಟು ಮತದಾನ ನಡೆದಿದ್ದರೆ, ತ್ರಿಪುರಾದಲ್ಲಿ ಶೇ.52.67 ರಷ್ಟು ಮಂದಿ ಮತಚಲಾವಣೆ ಮಾಡಿದ್ದು ಗರಿಷ್ಠ ಪ್ರಮಾಣದಲ್ಲಿ ಮತದಾನ ನಡೆದಿದೆ.

No Comments

Leave A Comment