ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಗದಗ: ನಗರ ಸಭೆ ಉಪಾಧ್ಯಕ್ಷೆಯ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಹತ್ಯೆ; ಮಲಗಿದ್ದಲ್ಲೇ ಭೀಕರ ಕೊಲೆ!
ಗದಗ: ಗದಗ- ಬೆಟಗೇರಿ ನಗರಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ.
ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಗೀಡಾದವರು. ಮೃತರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನುು ಕೊಲೆ ಮಾಡಲಾಗಿದೆ. ಕೊಲೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಎಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕನ ಮದುವೆ ಫಿಕ್ಸ್ ಮಾಡುವ ಕಾರ್ಯಕ್ರಮಕ್ಕೆ ಕೊಪ್ಪಳದಿಂದ ಸಂಬಂಧಿಗಳು ಆಗಮಿಸಿದ್ದರು.
ಮನೆಯ ಮೊದಲ ಮಹಡಿಯ ಕೋಣೆಯಲ್ಲಿ ಮಲಗಿದ್ದಲ್ಲೆ ಹತ್ಯೆ ಮಾಡಲಾಗಿದ್ದು, ತೀವ್ರ ರಕ್ತಸ್ರಾವದಿಂದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೊಲೆ ನಡೆದ ಪ್ರಕಾಶ್ ಬಾಕಳೆ ಮನೆಗೆ ಸಚಿವ ಹೆಚ್.ಕೆ.ಪಾಟೀಲ್ ಭೇಟಿ ನೀಡಿ, ಕುಟುಂಬಕ್ಕೆ ಧೈರ್ಯ ಹೇಳಿದರು.
ಈ ವೇಳೆ ಕುಟುಂಬಸ್ಥರು ಕೊಲೆಗಾರರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. ಆರೋಪಿಗಳನ್ನು ಕೂಡಲೆ ಬಂಧಿಸಲಾಗುವುದು ಎಂದು ಸಚಿವ ಹೆಚ್.ಕೆ ಪಾಟೀಲ್ ಕುಟುಂಬಸ್ಥರಿಗೆ ವಿಶ್ವಾಸ ನೀಡಿದರು. ಸುದ್ದಿ ತಿಳಿದು ಶ್ವಾನದಳದೊಂದಿಗೆ ಘಟನಾ ಸ್ಥಳಕ್ಕೆ ಬಂದ ಸ್ಥಳೀಯ ಪೊಲೀಸರು ಇಂಚಿಂಚು ಪರಿಶೀಲನೆ ನಡೆಸಿದ್ದಾರೆ.